ತಾಲೂಕು ಮಟ್ಟದ ಮಹಿಳಾ ಕ್ರೀಡಾ ಕೂಟ 

Spread the love

ತಾಲೂಕು ಮಟ್ಟದ ಮಹಿಳಾ ಕ್ರೀಡಾ ಕೂಟ 

ಮಂಗಳೂರು :ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟೀಯ ಮಹಿಳಾ ದಿನಾಚರಣೆ ಅಂಗವಾಗಿ ಅಂಗನವಾಡಿ ಕಾರ್ಯಕರ್ತೆಯರು/ಸಹಾಯಕಿಯರು, ಸ್ತ್ರೀಶಕ್ತಿ ಸಂಘಗಳ ಹಾಗೂ ಒಕ್ಕೂಟದ ಸದಸ್ಯರು, ಸ್ವಯಂ ಸೇವಾ ಸಂಸ್ಥೆಗಳ ಸಿಬ್ಬಂದಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು, ಸರ್ಕಾರಿ ಮಹಿಳಾ ಅಧಿಕಾರಿಗಳು/ನೌಕರರು, ಚುನಾಯಿತ ಮಹಿಳಾ ಪ್ರತಿನಿಧಿಗಳು, ಹದಿಹರೆಯದ ಕಿಶೋರಿಯರಿಗೆ ಮಂಗಳೂರು ತಾಲೂಕು ಮಟ್ಟದ ಮಹಿಳಾ ಕ್ರೀಡಾ ಕೂಟವು ಮಾರ್ಚ್ 2 ರಂದು ಮಂಗಳಾ ಕ್ರೀಡಾಂಗಣದಲ್ಲಿ ಜರುಗಿತು.

ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ ಮಹಿಳಾ ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ಮಾತನಾಡುತ್ತಾ ಆರೋಗ್ಯದ ದೃಷ್ಟಿಯಿಂದ ಕ್ರೀಡೆ ಮಹಿಳೆಯರಿಗೆ ಅತ್ಯವಶ್ಯಕವಾಗಿದೆ. ನಾವು ನಮ್ಮ ಕರ್ತವ್ಯ ನಿರ್ವಹಿಸುವುದರ ಜೊತೆಗೆ ಕ್ರೀಡೆಯಲ್ಲಿ ತೊಡಗಿಕೊಂಡು ಮಹಿಳೆಯರು ಮಾನಸಿಕವಾಗಿ ಸಾಕಷ್ಟು ಸದೃಡರಾಗಬೇಕು. ಮಹಿಳೆಯರು ಕ್ರೀಡೆಯಲ್ಲಿ ನಾವೇನು ಕಡಿಮೆ ಇಲ್ಲವೆನ್ನುವುಂತೆ ಅಂತರಾಷ್ಟೀಯ ಮಟ್ಟದಲ್ಲಿ ಸಾಧನೆಗೈದಿರುತ್ತಾರೆ. ಈ ನಿಟ್ಟಿನಲ್ಲಿ ಸರ್ಕಾರವು ತಾಲೂಕು, ಜಿಲ್ಲೆ, ರಾಜ್ಯ ಮಟ್ಟದಲ್ಲಿ ಮಹಿಳಾ ಕ್ರೀಡಾಕೂಟವನ್ನು ಎಲ್ಲಾ ವರ್ಗದ ಮಹಿಳೆಯರಿಗಾಗಿ ಆಯೋಜಿಸಿರುವ ಸರ್ಕಾರದ ಕ್ರಮ ಶ್ಲಾಘನೀಯವಾಗಿದೆ ಎಂದರು.

ತಾಲೂಕು ಪಂಚಾಯತ್ ಅಧ್ಯಕ್ಷ ಮೊಹಮ್ಮದ್ ಮೋನು ಮಾತನಾಡುತ್ತಾ ದೇಶವನ್ನು ರಕ್ಷಣೆ ಮಾಡಲು ನಮ್ಮ ಸೈನಿಕರು ಹೇಗೆ ಗಡಿಯಲ್ಲಿ ಯಾವುದನ್ನೂ ಲೆಕ್ಕಿಸಿದೆ ದುಡಿಯುತ್ತಿದ್ದಾರೋ, ಅದೇ ರೀತಿ ಮನೆಯನ್ನು ಬೆಳುಗುವ ಮಹಿಳೆಯರಿಗೆ ಮಾನಸಿಕವಾಗಿ ಸದೃಡರಾಗಲು ಕ್ರೀಡೆ ಅವಶ್ಯಕವಾಗಿದೆ ಎಂದರು. ಕ್ರೀಡಾಳುಗಳನ್ನು ರೂಪಿಸುವಲ್ಲಿ ಮಹತ್ತರ ಪಾತ್ರವಹಿಸುವ ಮಹಿಳೆಯರಿಗೆ ಈ ದಿನ ಕ್ರೀಡಾಕೂಟ ಆಯೋಜಿಸಿ ಅವರನ್ನು ಹುರಿದುಂಬಿಸುತ್ತೀರುವ ಸರ್ಕಾರದ ಕ್ರಮ ಅಭಿನಂದನಿಯವೆಂದರು.

ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಗಟ್ಟಿ ಮಾತನಾಡಿ ಯಾವಾಗಲೂ ಒತ್ತಡದಿಂದ ಕಾರ್ಯನಿರ್ವಹಿಸುತ್ತಿರುವ ಮಹಿಳೆಯರಿಗೆ ಕ್ರೀಡೆ ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢಗೊಳಿಸಲು ಸಹಕಾರವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಸುಜಾತ ಕೆ.ಪಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿ ಸೋಜ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾಗಳಾದ ಉಸ್ಮಾನ್ ಎ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸದಾನಂದ ಜಿ., ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೋಭ ಪಿ. ಸ್ರೀಶಕ್ತಿ ಬ್ಲಾಕ್ ಸೊಸೈಟಿ ಉಪಾಧ್ಯಕ್ಷೆ ಶಾರದ, ಉಪಸ್ಥಿತರಿದ್ದರು.

ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ಯಾಮಲಾ ಸಿ.ಕೆ ಸ್ವಾಗತಿಸಿದರು. ಮೇಲ್ವಿಚಾರಕಿ ಮಾಲಿನಿ ಕ್ರೀಡಾ ಪ್ರತಿಜ್ಞೆ ಭೋದಿಸಿದರು. ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿಗಳಾದ ಲಿಲ್ಲಿ ಪಾಯಸ್ ವಂದಿಸಿದರು.


Spread the love