ತುಳು ಭಾಷೆಗೆ ಆಡಳಿತ ಭಾಷೆಯ ಸ್ಥಾನಮಾನ: ಸುರೇಂದ್ರ ಬಿ ಕಂಬಳಿ ಸಂತಸ

Spread the love

ತುಳು ಭಾಷೆಗೆ ಆಡಳಿತ ಭಾಷೆಯ ಸ್ಥಾನಮಾನ: ಸುರೇಂದ್ರ ಬಿ ಕಂಬಳಿ ಸಂತಸ

ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರ ಮುತುವರ್ಜಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ನೀಡಿದ್ದು, ಇದು ಹಲವು ವರ್ಷಗಳ ಹೋರಾಟದ ಫಲಶೃತಿಯಾಗಿದೆ. ತುಳು ಭಾಷೆಗೆ ಸುದೀರ್ಘ ಇತಿಹಾಸವಿದ್ದು ಈ ಸ್ಥಾನಮಾನ ನೀಡಿರುವುದು ಅಭಿನಂದನಾರ್ಹ ಎಂದು ಮಂಗಳೂರು ತಾಲೂಕಿನ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುರೇಂದ್ರ ಬಿ ಕಂಬಳಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ತುಳು ಭಾಷೆಗೆ ಮಾನ್ಯತೆ ದೊರೆತ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಹಾಗೂ ಸಚಿವ ಸಂಪುಟದ ಎಲ್ಲಾ ಸದಸ್ಯರಿಗೆ ತಾಲೂಕಿನ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರ ವತಿಯಿಂದ ಅಭಿನಂದನೆ ಸಲ್ಲಿಸಿದ ಅವರು ತುಳುವನ್ನು 8ನೇ ಪರಿಚ್ಛೇದಕ್ಕೆ ಸೇರಿಸುವ ನಿಟ್ಟಿನಲ್ಲಿ ಜಿಲ್ಲೆಯ ಸಂಸದರು ಹಾಗೂ ಶಾಸಕರು ಪ್ರಯತ್ನ ಮಾಡಬೇಕು ಎಂದರು.


Spread the love
Subscribe
Notify of

0 Comments