ತೈಲ ಸೋರಿಕೆ: ಅಣಕು ಪ್ರದರ್ಶನ

Spread the love

ತೈಲ ಸೋರಿಕೆ: ಅಣಕು ಪ್ರದರ್ಶನ

ಮ0ಗಳೂರು : ಜಿಲ್ಲೆಯಲ್ಲಿ ತೈಲ ಸಾಗಾಟ ಹಡಗುಗಳ ಆಗಮನ ಹೆಚ್ಚಳವಾಗಿರುವುದರಿಂದ ತೈಲ ಸೋರಿಕೆಯಾದಲ್ಲಿ ಸಮುದ್ರ ಕಿನಾರೆಯನ್ನು, ಮೀನು ಮತ್ತು ಜನಚರಗಳನ್ನು ಹಾಗೂ ಸಾರ್ವಜನಿಕರನ್ನು ರಕ್ಷಿಸುವ ಉದ್ದೇಶದಿಂದ ಮಂಗಳೂರಿನಲ್ಲಿ ತೈಲ ಸೋರಿಕೆಯ ಅಣಕು ಕಾರ್ಯಾಚರಣೆ ನಡೆಸಲು ನಿರ್ಧರಿಸಲಾಗಿದೆ.

ಈ ಕುರಿತು ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ಡಾ. ಕೆ.ಜಿ. ಜಗದೀಶ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯಿತು. ಜಿಲ್ಲಾಧಿಕಾರಿಗಳು ಮಾತನಾಡಿ, ಜಿಲ್ಲೆಯಲ್ಲಿ ತೈಲ ಕಂಪೆನಿಗಳು ಮತ್ತು ಅದಕ್ಕೆ ಪೂರಕವಾದ ಅನೇಕ ಬೃಹತ್ ಉದ್ದಿಮೆಗಳು ಕಾರ್ಯಾಚರಿಸುತ್ತಿದ್ದು, ವಿದೇಶಗಳಿಂದ ಸಾಕಷ್ಟಯ ಸಂಖ್ಯೆಯ ಹಡಗುಗಳು ತೈಲೋತ್ಪನ್ನಗಳನ್ನು ಸಾಗಿಸಿಕೊಂಡು ಬರುತ್ತಿವೆ. ಈ ನಿಟ್ಟಿನಲ್ಲಿ ಸಮುದ್ರದಲ್ಲಿ ತೈಲ ಸೋರಿಕೆಯಾದರೆ ಕೈಗೊಳ್ಳಬೇಕಾದ ರಕ್ಷಣಾ ಕಾರ್ಯಗಳ ಬಗ್ಗೆ ಅಧಿಕಾರಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾಹಿತಿ ಇರಬೇಕಿದೆ. ಈ ನಿಟ್ಟಿನಲ್ಲಿ ಸಮುದ್ರದಲ್ಲಿ ತೈಲ ಸೋರಿಕೆಯ ಅಣಕು ಕಾರ್ಯಾಚರಣೆ ನಡೆಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

ಕಾರ್ಯಾಚರಣೆಯ ದಿನವನ್ನು ಶೀಘ್ರವೇ ಗೊತ್ತುಪಡಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಅಣಕು ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸುವ ಉದ್ದೇಶದಿಂದ ವಿವಿಧ ಅಧಿಕಾರಿಗಳಿಗೆ ವಿವಿಧ ಜವಾಬ್ದಾರಿಗಳನ್ನು ವಹಿಸಲಾಯಿತು. ಜಿಲ್ಲೆಯ ತೈಲ ಕಂಪೆನಿಗಳು, ಎನ್‍ಎಂಪಿಟಿ, ಕೋಸ್ಟ್‍ಗಾರ್ಡ್, ಪೊಲೀಸ್ ಇಲಾಖೆ ಸೇರಿದಂತೆ ಹಲವು ಸಂಸ್ಥೆಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳಿದ್ದಾರೆ.
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love