Home Mangalorean News Kannada News ತೋಡಾರು: ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿ- ಹಲವರಿಗೆ ಗಾಯ

ತೋಡಾರು: ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿ- ಹಲವರಿಗೆ ಗಾಯ

Spread the love

ತೋಡಾರು: ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿ- ಹಲವರಿಗೆ ಗಾಯ

ಮೂಡುಬಿದಿರೆ:ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ತೋಡಾರು ಎಂಬಲ್ಲಿ ಮಂಗಳವಾರ ಬೆಳಿಗ್ಗೆ ಖಾಸಗಿ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದು ಹಲವರು ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ಬಸ್ ಮತ್ತು ಲಾರಿ ಚಾಲಕರು ಹಾಗೂ ಬಸ್ಸಿನಲ್ಲಿದ್ದ ಸುಮಾರು ಎಂಟು ಮಂದಿ ಪ್ರಯಾಣಿಕರಿಗೆ ಗಂಭೀರ ಗಾಯವಾಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಸ್‌ನಲ್ಲಿದ್ದ ಇತರ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ.

ಖಾಸಗಿ ಎಕ್ಸ್ಪ್ರೆಸ್ ಬಸ್ ಎಂದಿನಂತೆ ಬೆಳಿಗ್ಗೆ ಮೂಡುಬಿದಿರೆಯಿಂದ ಮಂಗಳೂರಿಗೆ ಹೊರಟಿತ್ತು. ತೋಡಾರು ಮಸೀದಿ ಬಳಿ ತಲುಪುವಾಗ ಎದುರುಗಡೆಯಿಂದ ಲಾರಿ ಬರುತ್ತಿದ್ದು ಇವೆರಡು ಮುಖಾಮುಖಿ ಡಿಕ್ಕಿ ಹೊಡೆದವು. ಅಪಘಾತದ ವೇಳೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ಸ್ಥಳೀಯರು ನೆರವಾದರು. ಲಾರಿ ಮಂಗಳೂರಿನಿಂದ ಮೂಡುಬಿದಿರೆ ಮಾರ್ಗವಾಗಿ ಅಜೆಕಾರಿಗೆ ಹೋಗುವುದ್ದಾಗಿತ್ತು. ಅಪಘಾತದಿಂದಾಗಿ ಸ್ವಲ್ಪ ಹೊತ್ತು ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.


Spread the love

Exit mobile version