Home Mangalorean News Kannada News ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ

Spread the love

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ತಮ್ಮ ಸೇವೆಗೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ.


ಪ್ರಾಥಮಿಕ ಮೂಲಗಳ ಪ್ರಕಾರ ವೈಯುಕ್ತಿಕ ಕಾರಣಗಳನ್ನು ನೀಡಿ ತಮ್ಮಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

2005 ನೇ ಐಎಎಸ್ ಬ್ಯಾಚಿನ ಐಎಎಸ್ ಅಧಿಕಾರಿ ಸೆಂಥಿಲ್ ತಿರುಚಿರಾಪಳ್ಳಿಯಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿರುವ ಸೆಂಥಿಲ್ ಅವರು ಮೂರು ವರ್ಷ ಬಳ್ಲರಿಯಲ್ಲಿ ಸಹಾಯಕ ಕಮೀಷನರ್ ಆಗಿ, ನಂತರ ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾ ಅಧಿಕಾರಿಯಾಗಿ ಬಳಿಕ ಚಿತ್ರದುರ್ಗ ಹಾಗೂ ರಾಯಚೂರಿನಲ್ಲಿ ಜಿಲ್ಲಾಧಿಕಾರಿಯಾಗಿ, ಭೂ ವಿಜ್ಞಾನ ಮತ್ತು ಗಣಿ ಇಲಾಖೆಯ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ.


Spread the love

Exit mobile version