Home Mangalorean News Kannada News ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಗೆ ಆಂಧ್ರ ರಾಜ್ಯಪಾಲ ನ್ಯಾ. ಅಬ್ದುಲ್ ನಝೀರ್ ಭೇಟಿ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಗೆ ಆಂಧ್ರ ರಾಜ್ಯಪಾಲ ನ್ಯಾ. ಅಬ್ದುಲ್ ನಝೀರ್ ಭೇಟಿ

Spread the love

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಗೆ ಆಂಧ್ರ ರಾಜ್ಯಪಾಲ ನ್ಯಾ. ಅಬ್ದುಲ್ ನಝೀರ್ ಭೇಟಿ

ಮಂಗಳೂರು: ಆಂಧ್ರ ಪ್ರದೇಶದ ರಾಜ್ಯಪಾಲ ನ್ಯಾ. ಅಬ್ದುಲ್ ನಝೀರ್ ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ (ಪ್ರಜಾಸೌಧ)ಗೆ ಭೇಟಿ ನೀಡಿದರು.

ಜಿಲ್ಲಾಧಿಕಾರಿ ಹೆಚ್.ವಿ ದರ್ಶನ್ ಅವರು ಆಂಧ್ರ ಪ್ರದೇಶದ ರಾಜ್ಯಪಾಲರನ್ನು ಸ್ವಾಗತಿಸಿದರು.

ಜಿಲ್ಲಾಧಿಕಾರಿ ಕಚೇರಿಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಅವರು ಹೊಸ ಕಚೇರಿಯ ನಿರ್ಮಾಣ ಹಾಗೂ ಶೈಲಿಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕೊಠಡಿಯಲ್ಲಿದ್ದ ಜಿಲ್ಲೆಯಲ್ಲಿ ಆಡಳಿತ ನಡೆಸಿದ ಜಿಲ್ಲಾಧಿಕಾರಿಗಳ ಪಟ್ಟಿಯನ್ನು ಅವರು ವೀಕ್ಷಿಸಿದರು.

ಜಿಲ್ಲಾಧಿಕಾರಿಗಳು ರಾಜ್ಯಪಾಲರಿಗೆ ಯಕ್ಷಗಾನ ಶೈಲಿಯ ಸ್ಮರಣಿಕೆ ನೀಡಿ ಗೌರವಿಸಿದರು. ಆಂಧ್ರಪ್ರದೇಶದ ರಾಜ್ಯಪಾಲರ ಭೇಟಿ ಪ್ರಯುಕ್ತ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಿಗಿ ಬಂದೋ ಬಸ್ತ್ ಏರ್ಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರಾಜು.ಕೆ ಉಪಸ್ಥಿತರಿದ್ದರು.


Spread the love

Exit mobile version