Home Mangalorean News Kannada News ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕಾಲಿಕ ಮಳೆ- ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ಕೊಂಚ ರಿಲೀಫ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕಾಲಿಕ ಮಳೆ- ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ಕೊಂಚ ರಿಲೀಫ್

Spread the love

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕಾಲಿಕ ಮಳೆ- ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ಕೊಂಚ ರಿಲೀಫ್

ಮಂಗಳೂರು: ತಾಲೂಕಿನಾದ್ಯಂತ ಇಂದು ಬೆಳಿಗ್ಗೆ ಅಕಾಲಿಕ ಮಳೆ ಸುರಿದಿದ್ದು, ಬಿಸಿಲ ಬೇಗೆಯಿಂದ ತತ್ತರಿಸಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ.

ಬೆಳಿಗ್ಗೆ 8ಗಂಟೆಗೆ ಸುಮಾರಿಗೆ ಶುರುವಾದ ಮಳೆಯು ಕೆಲಹೊತ್ತುಗಳ ಕಾಲ ಮಳೆ ಸುರಿದಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರು ಮಳೆಯಿಂದ ಕೊಂಚ ನಿಟ್ಟುಸಿರು ಬಿಡುವಂತಾಗಿದೆ.

ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಬಳಿಕ ಸುರಿದ ಮಳೆಯು ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ತಂಪಿನ ವಾತಾವರಣ ಸೃಷ್ಟಿಯಾಗಿದೆ.

ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ 7 ದಿನಗಳ ಕಾಲ ಅಲ್ಲಲ್ಲಿ ಗುಡುಗು, ಸಿಡಿಲು ಹಾಗೂ ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮೇ 12ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ಭಾರೀ ಮಳೆಯೂ ಸುರಿಯಬಹುದೆಂದು ಎಚ್ಚರಿಕೆ ನೀಡಲಾಗಿದೆ.


Spread the love

Exit mobile version