ದಕ ಜಿಲ್ಲೆಯಲ್ಲಿ ಕೊರೋನಾ ಆರ್ಭಟ –ಒಂದೇ ದಿನ 79 ಮಂದಿಗೆ ಪಾಸಿಟಿವ್ ದೃಢ

Spread the love

ದಕ ಜಿಲ್ಲೆಯಲ್ಲಿ ಕೊರೋನಾ ಆರ್ಭಟ –ಒಂದೇ ದಿನ 79 ಮಂದಿಗೆ ಪಾಸಿಟಿವ್ ದೃಢ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಕೋರೊನಾ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗಿದ್ದು ಒಂದೇ ದಿನ 79 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ.

ಕೆಲವು ದಿನಗಳ ಹಿಂದೆ ಸೌದಿಯಿಂದ ಮರಳಿದ್ದ 75 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 370 ಕ್ಕೆ ಏರಿಕೆ ಯಾಗಿದೆ

ಎಲ್ಲಾ ಸೋಂಕಿತರನ್ನು ನಿಗದಿತ ಕೋವಿಡ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.


Spread the love