ದಕ ಜಿಲ್ಲೆಯಲ್ಲಿ ಸೋಮವಾರ 89 ಮಂದಿಗೆ ಕೋವಿಡ್-19 ಪಾಸಿಟಿವ್

Spread the love

ದಕ ಜಿಲ್ಲೆಯಲ್ಲಿ ಸೋಮವಾರ 89 ಮಂದಿಗೆ ಕೋವಿಡ್-19 ಪಾಸಿಟಿವ್

ಮಂಗಳೂರು: ದಕ ಜಿಲ್ಲೆಯಲ್ಲಿ ಸೋಮವಾರ 89 ಮಂದಿಗೆ ಕೋವಿಡ್–19 ಸೋಂಕು ತಗುಲಿರುವುದು ದೃಢವಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3685 ಕ್ಕೆ ಏರಿಕೆಯಾಗಿದೆ. ಇಬ್ಬರು ಮೃತಪಟ್ಟಿದ್ದು, 51 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ 11 ಮಂದಿ, ಶೀತ-45, ತೀವ್ರ ಉಸಿರಾಟ ತೊಂದರೆ-16, ವಿದೇಶದಿಂದ ಆಗಮಿಸಿದ ಇಬ್ಬರು, ಕಾಂಟ್ಯಾಕ್ಟ್ ಅಂಡರ್ ಟ್ರೇಸಿಂಗ್‌ನ 15 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ .

ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 57 ಮಂದಿ ಸೋಮವಾರ ಆಸ್ಪತ್ರೆಯಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇಲ್ಲಿಯವರೆಗೆ 1,548 ಮಂದಿ ಗುಣಮುಖರಾಗಿದ್ದಾರೆ. ಆಸ್ಪತ್ರೆಗಳಲ್ಲಿ 2,055 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಎಲ್ಲರ ಆರೋಗ್ಯ ಉತ್ತಮ ಸ್ಥಿತಿಯಲ್ಲಿದೆ.


Spread the love