ದಕ ಯುವ ಜೆಡಿಎಸ್ ಸಂಘಟನಾ ಕಾರ್ಯದರ್ಶಿಯಾಗಿ ಅರ್ಶಕ್ ಇಸ್ಮಾಯಿಲ್ ನೇಮಕ

Spread the love

ದಕ ಯುವ ಜೆಡಿಎಸ್ ಸಂಘಟನಾ ಕಾರ್ಯದರ್ಶಿಯಾಗಿ ಅರ್ಶಕ್ ಇಸ್ಮಾಯಿಲ್ ನೇಮಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾ ದಳ ಜಾತ್ಯಾತೀತ ಪಕ್ಷದ ಸಂಘಟನಾ ಕಾರ್ಯದರ್ಶಿಯನ್ನಾಗಿ ಅರ್ಶಕ್ ಇಸ್ಮಾಯಿಲ್ ಅವರನ್ನು ಆಯ್ಕೆ ಮಾಡಲಾಗಿದೆ. ಜಿಲ್ಲಾ ಅಧ್ಯಕ್ಷರಾದ ಮಹಮ್ಮದ್ ಕುಂಞ ಅವರ ಆದೇಶದಂತೆ ಈ ಆಯ್ಕೆ ಮಾಡಿಲಾಗಿದೆ.

ಈ ಕುರಿತು ಅರ್ಶಕ್ ಇಸ್ಮಾಯಿಲ್ ಅವರಿಗೆ ಆದೇಶ ಪತ್ರವನ್ನು ನೀಡಿರುವ ಜಿಲ್ಲಾ ಯುವ ಜನತಾ ದಳ ಅಧ್ಯಕ್ಷ ಅಕ್ಷಿತ್ ಸುವರ್ಣ ಅವರು ಸಂಘಟನಾ ಕಾರ್ಯದರ್ಶಿಯ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ತತ್ವ ಹಾಗೂ ಸಿದ್ದಾಂತಗಳಿಗೆ ಬದ್ಧರಾಗಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನತಾದಳ (ಜಾತ್ಯಾತೀತ) ಪಕ್ಷವನ್ನು ಹಾಗೂ ಯುವ ವಿಭಾಗವನ್ನು ಪರಿಣಾಮಕಾರಿಯಾಗಿ ಸಂಘಟಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ಸೂಚನೆ ನೀಡಿದ್ದಾರೆ.


Spread the love

1 Comment

Comments are closed.