Home Mangalorean News Kannada News ದರೋಡೆ ಪ್ರಕರಣದ ನಾಲ್ವರು ಆರೋಪಿಗಳ ಬಂಧನ

ದರೋಡೆ ಪ್ರಕರಣದ ನಾಲ್ವರು ಆರೋಪಿಗಳ ಬಂಧನ

Spread the love

ದರೋಡೆ ಪ್ರಕರಣದ ನಾಲ್ವರು ಆರೋಪಿಗಳ ಬಂಧನ

ಮಂಗಳೂರು: ನಗರದ ಕದ್ರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ವಾರದ ಹಿಂದೆ ವ್ಯಕ್ತಿಯೊಬ್ಬರನ್ನು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿ ಆರೋಪಿಗಳನ್ನು ಮಂಗಳೂರು ಸಿಸಿಬಿ ಮತ್ತು ಕದ್ರಿ ಠಾಣಾ ಪೋಲಿಸರು ಶುಕ್ರವಾರ ಬಂಧಿಸಿದ್ದಾರೆ.

ಬಂಧಿತರನ್ನು ಪೆರ್ಡೂರಿನ ತೌಸಿಫ್ ಯಾನೆ ಮುನ್ನ ಶೈಲು (25), ಮಂಜನಾಡಿಯ ಮಹಮ್ಮದ್ ಅಬ್ದುಲ್ ಯಾನ್ (19), ಉಳ್ಳಾಲ ಧರ್ಮನಗರದ ಅಬ್ದುಲ್ ಸ್ವಾನ್ (22), ಬಜಾಲ್ ಪಡ್ಪು ನಿವಾಸಿ ಮಹಮ್ಮದ್ ಅರೀಫ್ (31) ಎಂದು ಗುರುತಿಸಲಾಗಿದೆ.

ಮಾರ್ಚ್ 4ರಂದು ರಾತ್ರಿ ಸುಮಾರು 9-30 ಗಂಟೆಗೆ ಮಂಗಳೂರು ಕುಲಶೇಖರ ಬಳಿಯ ಲಾನ್ಸಿ ಸಿರಿಲ್ ಲೋಬೋ ಎಂಬವರು ಕೆಪಿಟಿ ಪೆಟ್ರೋಲ್ ಪಂಪ್ ನಲ್ಲಿ ತನ್ನ ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಹಾಕಿಸಿ ನಂತರ ಸ್ವಲ್ಪ ಮುಂದೆ ಹೋಗಿ ವಾಹನವನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಿದ ಸಮಯ ಅವರ ಹಿಂದುಗಡೆಯಿಂದ ಮಾರುತಿ ಅಲ್ಟೋ ಕಾರಿನಲ್ಲಿ ಬಂದ 5 ಮಂದಿ ಹಲ್ಲೆ ನಡೆಸಿ ಅವರ ಮೊಬೈಲ್ ಫೋನ್ ಹಾಗೂ ನಗದು ಹಣವನ್ನು ದರೋಡೆ ಮಾಡಿದ್ದರು, ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಕೃತ್ಯದಲ್ಲಿ ಭಾಗಿಯಾದ ಆರೋಪಿಗಳು ದೇರಳಕಟ್ಟೆ ಬಳಿಯ ನಾಟೆಕಲ್ ಎಂಬಲ್ಲಿ ಇದ್ದಾರೆಂಬ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಈ ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಬಂಧಿಸಿ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ. ಆರೋಪಿಗಳೆಲ್ಲಾ ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಆರೋಪಿಗಳ ಪೈಕಿ ತೌಸಿಫ್ @ ಮುನ್ನ @ ಶೈಲು ಎಂಬಾತನ ವಿರುದ್ಧ 2013 ನೇ ಇಸವಿಯಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಯತ್ನ ಪ್ರಕರಣ ದಾಖಲಾಗಿದ್ದು, ಈಗ ಸುಮಾರು 15 ದಿನಗಳ ಹಿಂದೆ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡಿದ್ದನು. ಮೊಹಮ್ಮದ್ ಅಬ್ದುಲ್ ಫಯಾನ್ ಎಂಬಾತನ ವಿರುದ್ಧ ಈ ಹಿಂದೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ಹಾಗೂ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಅಂಗಡಿಯೊಂದಕ್ಕೆ ಬೆಂಕಿ ಕೊಟ್ಟ ಪ್ರಕರಣ ದಾಖಲಾಗಿರುತ್ತದೆ. ಅಬ್ದುಲ್ ಸಫ್ವಾನ್ ಎಂಬಾತನ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿರುತ್ತದೆ. ಮೊಹಮ್ಮದ್ ಅರೀಫ್ ಎಂಬಾತನ ವಿರುದ್ಧ ಮಂಗಳೂರು ದಕ್ಷಿಣ, ಮಂಗಳೂರು ಪೂರ್ವ, ಬರ್ಕೆ ಪೊಲೀಸ್ ಠಾಣೆಗಳಲ್ಲಿ ದ್ವಿಚಕ್ರ ವಾಹನ ಕಳ್ಳತನಕ್ಕೆ ಸಂಬಂಧಪಟ್ಟಂತೆ 3 ಪ್ರಕರಣಗಳು ದಾಖಲಾಗಿರುತ್ತದೆ.

ಈ ಪತ್ತೆಕಾರ್ಯದಲ್ಲಿ ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಸುನೀಲ್ ವೈ ನಾಯ್ಕ್ ರವರ ತಂಡ ಮತ್ತು ಮಂಗಳೂರು ಪೂರ್ವ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಮಾರುತಿ ಜಿ ನಾಯಕ್ ರವರ ತಂಡವು ಭಾಗವಹಿಸಿದ್ದರು.


Spread the love

Exit mobile version