ದಸರಾ ಉದ್ಘಾಟನಾ ಕಾರ್ಯಕ್ರಮ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದಾತನ ಬಂಧನ

Spread the love

ದಸರಾ ಉದ್ಘಾಟನಾ ಕಾರ್ಯಕ್ರಮ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದಾತನ ಬಂಧನ

ಸುಳ್ಯ: ಸಾಮಾಜಿಕ ಜಾಲತಾಣ Facebook ನಲ್ಲಿ ಅಸಭ್ಯ ಮತ್ತು ನಿಂದನಾತ್ಮಕ ಪೋಸ್ಟ್ ಮಾಡಿದ ಆರೋಪದ ಮೇಲೆ ಬಂಟ್ವಾಳ ತಾಲೂಕಿನ ಬರಿಮಾರು ನಿವಾಸಿ ಪುರುಷೋತ್ತಮ ಆಚಾರ್ಯರನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.

ಮಾಹಿತಿಯ ಪ್ರಕಾರ, “Purush Acharya” ಎಂಬ ಖಾತೆಯಿಂದ ದಸರಾ ಉದ್ಘಾಟನೆ ಮಾಡಿದ ಬಾನು ಮುಸ್ತಾಕ್ ಹಾಗೂ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳ ಬಗ್ಗೆ ಅಸಭ್ಯ ಪದಗಳಲ್ಲಿ ನಿಂದನಾತ್ಮಕ ಪೋಸ್ಟ್ ಮಾಡಲಾಗಿತ್ತು. ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ.112/2025 ರಂತೆ ಕಲಂ 296, 196, 354 ಬಿ.ಎನ್.ಎಸ್. ಅಡಿಯಲ್ಲಿ ಹಾಗೂ ಸುಬ್ರಮಣ್ಯ ಠಾಣೆಯಲ್ಲಿ ಅ.ಕ್ರ.55/2025 ರಂತೆ ಕಲಂ 353(3), 353(4) ಬಿ.ಎನ್.ಎಸ್. ಅಡಿ ಪ್ರಕರಣಗಳು ದಾಖಲಾಗಿವೆ.

ಈ ಪ್ರಕರಣದ ತನಿಖೆಯ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ಸಹಕಾರದೊಂದಿಗೆ ಸುಳ್ಯ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.
ಆರೋಪಿಯ ವಿರುದ್ಧ ವಿಚಾರಣೆ ನಡೆಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments