ದಸರಾ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಭಾಗಿ

Spread the love

ದಸರಾ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಭಾಗಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ, ಮಂಗಳೂರು ತಾಲೂಕು ಪಂಚಾಯತ್, ಮೈ ಭಾರತ್ ದಕ್ಷಿಣ ಕನ್ನಡ, ತಾಲೂಕು ಯುವಜನ ಒಕ್ಕೂಟ, ಮಂಗಳೂರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಭಾಗವಹಿಸಿದರು.

  

ಈ ಸಂದರ್ಭದಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಕ್ರೀಡಾಪಟುಗಳಿಗೆ ಶುಭ ಹಾರೈಸಿದ ಅವರು, ಯುವಜನರ ಪ್ರತಿಭೆ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಇಂತಹ ಕಾರ್ಯಕ್ರಮಗಳು ಆರೋಗ್ಯಕರ ಮತ್ತು ಸಶಕ್ತ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಲಿವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಆಯೋಜಕರು, ಕ್ರೀಡಾ ಕ್ಷೇತ್ರದ ಗಣ್ಯರು, ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಕ್ರೀಡಾಪಟುಗಳು ಉಪಸ್ಥಿತರಿದ್ದರು.


Spread the love
Subscribe
Notify of

0 Comments