ದೀಪಾವಳಿ – ನಿಷೇಧಿತ ಪ್ರದೇಶದಲ್ಲಿ ಸಿಡಿಮದ್ದು ಬಳಕೆ ನಿಷೇಧ

Spread the love

ದೀಪಾವಳಿ – ನಿಷೇಧಿತ ಪ್ರದೇಶದಲ್ಲಿ ಸಿಡಿಮದ್ದು ಬಳಕೆ ನಿಷೇಧ

ಮಂಗಳೂರು :  ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ಉದ್ದೇಶದಿಂದ ಪರಿಸರ ಸಂರಕ್ಷಣೆ ನಿಯಮಾವಳಿಗಳು 1999 ರ ಅನ್ವಯ ಹಾಗೂ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದ ಪ್ರಕಾರ 125 ಆb (ಂI) ಅಥವಾ 145 ಆb(ಅ) ಠಿಞ ಕ್ಕಿಂತ (ಪಟಾಕಿ ಸಿಡಿಸುವ ಸ್ಥಳದಿಂದ 4 ಮೀಟರ್ ಅಂತರದಲ್ಲಿ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಮತ್ತು ಉಪಯೋಗಿಸುವುದಾಗಲಿ ನಿಷೇಧಿಸಲ್ಪಟ್ಟಿದೆ. ಆದುದರಿಂದ ಸಾರ್ವಜನಿಕರು 125 ಆb (ಂI) ಅಥವಾ 145 ಆb(ಅ) ಠಿಞ ಕ್ಕಿಂತ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಉಪಯೋಗಿಸಬಾರದೆಂದು ತಿಳಿಸಲಾಗಿದೆ.

ಅಲ್ಲದೆ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಪಟಾಕಿ/ ಸಿಡಿಮದ್ದು, ಸಿಡಿಸುವುದನ್ನು ನಿಷೇಧಿಸಲಾಗಿದೆ. ದಿನದ ಯಾವುದೇ ಸಮಯದಲ್ಲಿ ನಿಶಬ್ದ ವಲಯಗಳೆಂದು ಘೋಷಿಸಲ್ಪಟ್ಟಿರುವ ಸ್ಥಳಗಳ (ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರ ಇತ್ಯಾದಿಗಳು) ಸುತ್ತಮತ್ತ ಯಾವುದೇ ರೀತಿಯ ಶಬ್ದ ಉಂಟು ಮಾಡುವ ನಿಷೇದಿತ ಪಟಾಕಿ/ ಸಿಡಿಮದ್ದು ಬಳಸಬಾರದು.

ನಗರ ಮತ್ತು ಪಟ್ಟಣದ ಚಿಕ್ಕ ಚಿಕ್ಕ ಬೀದಿಗಳಲ್ಲಿ ಪಟಾಕಿ ಮತ್ತು ಸಿಡಿಮದ್ದುಗಳನ್ನು, ಬಾಣ ಬಿರುಸುಗಳನ್ನು ಉಪಯೋಗಿಸುವುದರಿಂದ ಅಲ್ಲಿನ ನಿವಾಸಿಗಳಿಗೆ ಹಾನಿಯುಂಟಾಗುವ ಅಥವಾ ಬೆಂಕಿ ಹಾಗೂ ಸ್ಪೋಟದಿಂದ ಅಪಾಯಗಳು ಆಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಹಸಿರು ಪಟಾಕಿ ಹಾಗೂ ಸಿಡಿಮದ್ದುಗಳನ್ನು ವಸತಿ ಪ್ರದೇಶಗಳಲ್ಲಿ ಉಪಯೋಗಿಸುವ ಬದಲು ಮೈದಾನಗಳಲ್ಲಿ ರಾತ್ರಿ ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಸಿಡಿಸಬೇಕು ಹಾಗೂ ದೀಪಾವಳಿ ಹಬ್ಬವನ್ನು ಸಿಡಿಮದ್ದು, ಪಟಾಕಿಗಳನ್ನು ಉಪಯೊಗಿಸದೇ ದೀಪದ ಹಬ್ಬವನ್ನಾಗಿ ಆಚರಿಸಬೇಕು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಲಿಯ ಪ್ರಕಟಣೆ ತಿಳಿಸಿದೆ.


Spread the love