Home Mangalorean News Kannada News ದುಬಾಯಿ: ಶಾರ್ಜಾದಲ್ಲಿ ನವೆಂಬರ್ 19-20ರಂದು ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ

ದುಬಾಯಿ: ಶಾರ್ಜಾದಲ್ಲಿ ನವೆಂಬರ್ 19-20ರಂದು ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ

Spread the love

ದುಬಾಯಿ: ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ ಸಮಿತಿ ಕರ್ನಾಟಕ 12 ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನವನ್ನು ಶಾರ್ಜಾ ಕರ್ನಾಟಕ ಸಂಘ ಮತ್ತು ಹೃದಯವಾಹಿನಿ ಕರ್ನಾಟಕ ಸಂಯುಕ್ತ ಆಶ್ರಯದಲ್ಲಿ 2015 ರ ನವೆಂಬರ್ 19, 20 ರಂದು ಶಾರ್ಜಾದಲ್ಲಿ ಸಮ್ಮೇಳನವನ್ನು ಆಯೋಜಿಸಿಜಿದ್ದು ಸಾವಿರಾರು ಸಂಖ್ಯೆಯಲ್ಲಿ ಕನ್ನಡಿಗರು ಭಾಗವಹಿಸಲಿದ್ದಾರೆ.

ಕರ್ನಾಟಕದಿಂದ ಕಲಾವಿದರು, ಸಂಗೀತಗಾರರು, ಸಾಹಿತಿಗಳು, ಗಣ್ಯರ ತಂಡ ಶಾರ್ಜಾದಲ್ಲಿ ನಡೆಯುವ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಹೃದಯವಾಹಿನಿ ಕನರ್ಾಟಕ ಮುಖ್ಯಸ್ಥರಾದ ಪಿ ಮಂಜುನಾಥ್ ತಂಡದ ಸಾರಥ್ಯ ವಹಿಸಲಿದ್ದಾರೆ.

VKSS Panel (1)

ಕರ್ನಾಟಕ ಸಂಘ ಶಾರ್ಜಾ ಕಾರ್ಯಾಕಾರಿ ಸಮಿತಿಯ ವಿಶೇಷ ಸಭೆಯಲ್ಲಿ ಅಧ್ಯಕ್ಷರಾದ ಸತೀಶ್ ವೆಂಕಟರಮಣರವರು ಸಮ್ಮೇಳನದ ಪೂರ್ಣ ಮಾಹಿತಿಯನ್ನು ನೀಡಿ ನವೆಂಬರ್ ತಿಂಗಳಿನಲ್ಲಿ ಕರ್ನಾಟಕ ರಾಜ್ಯೋತ್ಸವ ಮತ್ತು 12 ನೇ ವಿಶ್ವ ಕನ್ನಡ ಸಮ್ಮೇಳನವನ್ನು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಅಧಿಕೃತವಾಗಿ ಘೋಷಣೆ ಮಾಡಿದರು.

ಕರ್ನಾಟಕ ಸಂಘದ ಪ್ರತಿಷ್ಠಿತ ಮಯೂರ ಪ್ರಶಸ್ತಿ ಸಮಾರಂಭ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನದ ಸಮಾರಂಭದಲ್ಲಿ ನಡೆಯಲಿದ್ದು ಹೆಚ್ಚಿನ ಶೋಭೆ ತರಲಿದೆ. ಹಲವಾರು ಅತ್ಯುತ್ತಮ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಿರುವ ಕರ್ನಾಟಕ ಸಂಘ ಶಾರ್ಜಾದ ಆಶ್ರಯದಲ್ಲಿ ನಡೆಯಲಿರುವ ಕನ್ನಡಿಗರ ಸಮಾವೇಶದ ದಾಖಲೆಯಾಗಲಿದೆ


Spread the love

Exit mobile version