ದೇರಳಕಟ್ಟೆ:ಮನೆ ಮೇಲೆ ತಡೆಗೋಡೆ ಬಿದ್ದು 10 ವರ್ಷದ ಬಾಲಕಿ ಮೃತ್ಯು

Spread the love

ದೇರಳಕಟ್ಟೆ:ಮನೆ ಮೇಲೆ ತಡೆಗೋಡೆ ಬಿದ್ದು 10 ವರ್ಷದ ಬಾಲಕಿ ಮೃತ್ಯು

ಉಳ್ಳಾಲ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಗೆ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ಕಾನಕರೆ ಎಂಬಲ್ಲಿ ನಡೆದಿದೆ.

ಮೃತ ಮಗುವನ್ನು ನೌಶಾದ್ ರ ಪುತ್ರಿ ಫಾತಿಮ ನಈಮ (10) ಎಂದು ಗುರುತಿಸಲಾಗಿದೆ. ಕಾನಕರೆಯಲ್ಲಿರುವ ನೌಶಾದ್ ಅವರ ಮನೆಗೆ ಹಿಂಬದಿಯ ಗುಡ್ಡೆ, ತಡೆಗೋಡೆ ಕುಸಿದು ಬಿದ್ದಿದ್ದು, ಮನೆಯ ಕೊಠಡಿ ಯ ಕಿಟಕಿ ಮಗುವಿನ ಮೇಲೆ ಬಿದ್ದು ಈ ದುರಂತ ಸಂಭವಿಸಿದೆ.

ಘಟನೆ ನಡೆದ ಕೂಡಲೇ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.


Spread the love
Subscribe
Notify of

0 Comments
Inline Feedbacks
View all comments