ದೇರಳಕಟ್ಟೆ| ಬೊಲೆರೊ ವಾಹನ ಢಿಕ್ಕಿ: ಪಾದಚಾರಿ ಮಹಿಳೆ ಸ್ಥಳದಲ್ಲೇ ಮೃತ್ಯು
ಉಳ್ಳಾಲ: ಬೊಲೆರೊ ವಾಹನವೊಂದು ಪಾದಚಾರಿ ಮಹಿಳೆಗೆ ಢಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ದೇರಳಕಟ್ಟೆಯಲ್ಲಿ ಇಂದು ರಾತ್ರಿ ವೇಳೆ ನಡೆದಿದೆ.
ಮೃತ ಮಹಿಳೆಯನ್ನು ಕೇರಳ ಮೂಲದ ನಿವಾಸಿ ಶ್ರೀ ಕಮಲ (58) ಎಂದು ಗುರುತಿಸಲಾಗಿದೆ.
ಅವರ ಪುತ್ರಿ ಮೀರ ಎಂಬವರು ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದು, ತಾಯಿ ಮತ್ತು ಪುತ್ರಿ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದರು. ಶ್ರೀ ಕಮಲ ಅವರು ಅಪಾರ್ಟ್ ಮೆಂಟ್ ಗೆ ಹೋಗಲು ರಸ್ತೆ ದಾಟುತ್ತಿದ್ದ ಸಂದರ್ಭ ಬೊಲೆರೊ ವಾಹನ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಗಂಭೀರ ಗಾಯಗೊಂಡ ಶ್ರೀ ಕಮಲ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.