ದೈವದ ನಡೆ-ನುಡಿಗಳ ಬಗ್ಗೆ ಉಂಟಾದ ಭಿನ್ನಾಭಿಪ್ರಾಯ: ಸ್ಪಷ್ಟೀಕರಣ

Spread the love

ದೈವದ ನಡೆ-ನುಡಿಗಳ ಬಗ್ಗೆ ಉಂಟಾದ ಭಿನ್ನಾಭಿಪ್ರಾಯ: ಸ್ಪಷ್ಟೀಕರಣ

ಮಂಗಳೂರು: ಧಾರ್ಮಿಕ ದತ್ತಿ ಇಲಾಖೆ ಅಧೀನದ ಮಂಗಳೂರು ತಾಲೂಕು ಶ್ರೀ ಬ್ರಹ್ಮ ದೇವರು ಇಷ್ಟ ದೇವತಾ ಬಲವಾಂಡಿ -ಪಿಲಿಚಾಂಡಿ ದೈವಸ್ಥಾನ, ಪಡುಪೆರಾರ-ಕ್ಷೇತ್ರದಲ್ಲಿ ಶತಮಾನದ ಕಾಲದ ಕಟ್ಟು ಕಟ್ಟಳೆಯಂತೆ, ಗುತ್ತು ಬರ್ಕೆ ಮಹನೀಯರು ಹಾಗೂ ಗ್ರಾಮಸ್ಥರು, ಸಾರ್ವಜನಿಕರ ಕೂಡುವಿಕೆಯಿಂದ ನಡೆಸಲ್ಪಡುವ ಪುದ್ದರ್ -ಮೆಚ್ಚಿ ಜಾತ್ರೆಯು ಇತ್ತೀಚಿಗೆ ಕ್ಷೇತ್ರದಲ್ಲಿ ನಡೆದಿರುತ್ತದೆ. ಈ ಸಂದರ್ಭದಲ್ಲಿ ದೈವದ ಪಾತ್ರಿ-ದೈವವು ನೀಡಿದ ಅಭಯ -ನಡೆ-ನುಡಿಗಳ ವಿಚಾರದಲ್ಲಿ ಗೊಂದಲ ಭಿನ್ನಾಭಿಪ್ರಾಯ ಏರ್ಪಟ್ಟಿರುವುದು ಕ್ಷೇತ್ರದ ಆಡಳಿತ ಮಂಡಳಿಯ ಗಮನಕ್ಕೆ ಬಂದಿರುತ್ತದೆ.

ಆದರೆ ಕ್ಷೇತ್ರದ ಬಲವಾಂಡಿ -ಪಿಲಿಚಾಂಡಿ ದೈವದ ನರ್ತನದ ಬಳಿಕ ನಡೆಯುವ ನಡೆ-ನುಡಿಗಳ ಸಂದರ್ಭದಲ್ಲಿ ಕೆಲವೊಂದು ಯುವಕರುಗಳು ದೈವ-ದೇವರ, ಆಚಾರ-ವಿಚಾರದಲ್ಲಿ ಆಗುತ್ತಿರುವ ಅಪಪ್ರಚಾರ ವಿಚಾರದಲ್ಲಿ ದೈವದ ಸಮಕ್ಷಮ ನಿವೇದನೆ ಮಾಡಿ ಕೊಂಡಿರುತ್ತಾರೆ. ಈ ಬಗ್ಗೆ ದೈವವು ಸೂಕ್ತ ಅಭಯವನ್ನು ನೀಡಿರುತ್ತದೆ. ವಿನ: ಯಾವುದೇ ಚಲನಚಿತ್ರ ಅದರಲ್ಲೂ ಮುಖ್ಯವಾಗಿ ಪ್ರಕೃತ ಪ್ರಚಾರದಲ್ಲಿರುವ ಕಾಂತರ-1 ಬಗ್ಗೆ ಯಾವುದೇ ಅಭಯ ನುಡಿಯನ್ನು ದೈವವು ನೀಡಿರುವುದಿಲ್ಲ.

ಮೇಲಿನಂತೆ ಶ್ರೀ ಕ್ಷೇತ್ರ ಪೆರಾರದದಲ್ಲಿ ನಡೆದ ಜಾತ್ರೆ ಸಂದರ್ಭದಲ್ಲಿನ ದೈವ ನಡೆ-ನುಡಿಯಲ್ಲಿ ಯಾವುದೇ ನಿರ್ದಿಷ್ಟ ವ್ಯಕ್ತಿಗಳು /ಚಲನಚಿತ್ರದ ಬಗ್ಗೆ ಯಾವುದೇ ಅಭಯ-ನುಡಿ ನೀಡುವ ಸಂದರ್ಭ ಬಂದಿರುವ ಕಾರಣ, ಪ್ರಕೃತ ಈ ವಿಚಾರದಲ್ಲಿನ ಗೊಂದಲ-ಭಿನ್ನಾಭಿಪ್ರಾಯಗಳಿಗೆ ಶ್ರೀ ಕ್ಷೇತ್ರದ ದೈವ-ದೇವರು-ಆಡಳಿತ ಮಂಡಳಿಯು ಹೊಣೆಗಾರರಲ್ಲವೆಂದು ದೈವಸ್ಥಾನದ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments