ದ್ವಿತೀಯ ಪಿಯು ವಾಣಿಜ್ಯ ವಿಭಾಗದಲ್ಲಿ 9ನೇ ಸ್ಥಾನ – ಕೆಥೊಲಿಕ್ ಸಭಾದಿಂದ ಅಯೋನಾ ಲೂವಿಸ್ ಗೆ ಸನ್ಮಾನ

Spread the love

ದ್ವಿತೀಯ ಪಿಯು ವಾಣಿಜ್ಯ ವಿಭಾಗದಲ್ಲಿ 9ನೇ ಸ್ಥಾನ – ಕೆಥೊಲಿಕ್ ಸಭಾದಿಂದ ಅಯೋನಾ ಲೂವಿಸ್ ಗೆ ಸನ್ಮಾನ

ಉಡುಪಿ: ದ್ವಿತೀಯ ಪಿಯುಸಿ ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ 9 ನೇ ಸ್ಥಾನ ಪಡೆದ ಬ್ರಹ್ಮಾವರದ ಕ್ಯಾನ್ಯೂಟ್ ಮತ್ತು ಅನಿತಾ ಲೂವಿಸ್ ಅವರ ಪುತ್ರಿಯಾದ ಅಯೋನಾ ಲೂವಿಸ್ ಅವರನ್ನು ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ವತಿಯಿಂದ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು.

ಈ ವೇಳೆ ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ಅಧ್ಯಕ್ಷರಾದ ಆಲ್ವಿನ್ ಕ್ವಾಡ್ರಸ್, ಆಧ್ಯಾತ್ಮಿಕ ನಿರ್ದೇಶಕರಾದ ವಂ|ಫರ್ಡಿನಾಂಡ್ ಗೊನ್ಸಾಲ್ವಿಸ್, ನಿಕಟಪೂರ್ವ ಅಧ್ಯಕ್ಷರಾದ ವಲೇರಿಯನ್ ಫೆರ್ನಾಂಡಿಸ್, ಕೋಶಾಧಿಕಾರಿ ಜೆರಾಲ್ಡ್ ರೊಡ್ರಿಗಸ್, ಕೇಂದ್ರಿಯ ಸಮಿತಿಯ ಕಾರ್ಯದರ್ಶಿ ಹಾಗೂ ಕಲ್ಯಾಣಪುರ ವಲಯ ಅಧ್ಯಕ್ಷ ಸಂತೋಷ್ ಕರ್ನೆಲಿಯೊ, ಬ್ರಹ್ಮಾವರ ಘಟಕದ ಅಧ್ಯಕ್ಷರಾದ ಮ್ಯಾಥ್ಯು ಪಿ ಲೂವಿಸ್ ಉಪಸ್ಥಿತರಿದ್ದರು.


Spread the love