ದ.ಕ.ಜಿಲ್ಲಾ ಎನ್.ಎಸ್.ಯು.ಐ ಪೋಸ್ಟರ್ ಅಭಿಯಾನ ಹಲವಾರು ವಿದ್ಯಾರ್ಥಿಗಳು ಭಾಗಿ — ಶೌವಾದ್ ಗೂನಡ್ಕ

Spread the love

ದ.ಕ.ಜಿಲ್ಲಾ ಎನ್.ಎಸ್.ಯು.ಐ ಪೋಸ್ಟರ್ ಅಭಿಯಾನ ಹಲವಾರು ವಿದ್ಯಾರ್ಥಿಗಳು ಭಾಗಿ — ಶೌವಾದ್ ಗೂನಡ್ಕ

ಮಂಗಳೂರು: ಕರ್ನಾಟಕ ಸರ್ಕಾರವು ಲಾಕ್ ಡೌನ್ ಸಂದರ್ಭದಲ್ಲಿ ಸಮಸ್ಯೆಗೆ ಸಿಲುಕಿರುವ ವಿದ್ಯಾರ್ಥಿಗಳ ಪರ ಉತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಎನ್.ಎಸ್.ಯು.ಐ ವತಿಯಿಂದ ಕಳೆದ 7 ದಿನಗಳಿಂದ ನಡೆಯುತ್ತಿರುವ “ನಾನು ವಿದ್ಯಾರ್ಥಿ, ನನ್ನ ಭವಿಷ್ಯದ ರಕ್ಷಣೆ ಸರ್ಕಾರದ ಹೊಣೆ” ಎಂಬ ಶೀರ್ಷಿಕೆಯ ಪೋಸ್ಟರ್ ಅಭಿಯಾನಕ್ಕೆ ಹಲವಾರು ವಿದ್ಯಾರ್ಥಿಗಳು ಕೈಜೋಡಿಸಿದ್ದು ಸರ್ಕಾರವು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅವರಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ತೀರ್ಮಾನಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾ ಎನ್.ಎಸ್.ಯು.ಐ ಉಪಾಧ್ಯಕ್ಷರಾದ ಶೌವಾದ್ ಗೂನಡ್ಕರವರು ಒತ್ತಾಯಿಸಿದ್ದಾರೆ.

ಒಂದು ವಾರದ ಈ ಅಭಿಯಾನವು ಮೇ 25 ರ ಸೋಮವಾರಕ್ಕೆ ಅಧಿಕೃತವಾಗಿ ಮುಕ್ತಾಯಗೊಂಡಿದ್ದು, ಆದರೆ ಮುಂದಕ್ಕೂ ಕೂಡ ವಿದ್ಯಾರ್ಥಿಗಳು ಇದನ್ನು ಮುಂದುವರೆಸಬಹುದಾಗಿದೆ. ಸಾಮಾಜಿಕ ಮಾಧ್ಯಮಗಳಾದ ಫೇಸ್ ಬುಕ್, ಟ್ವಿಟ್ಟರ್ ಮೂಲಕ ಸಂಬಂಧಪಟ್ಟವರಿಗೆ ಈ ಅಭಿಯಾನದ ಉದ್ದೇಶವನ್ನು ಮುಟ್ಟಿಸುವ ಪ್ರಯತ್ನವನ್ನು ಮಾಡಿದ್ದೇವೆ. ವಿದ್ಯಾರ್ಥಿಗಳ ಪ್ರಮುಖ ಸಮಸ್ಯೆಗಳಾದ ಆನ್ ಲೈನ್ ತರಗತಿಗಳನ್ನು ನಡೆಸುತ್ತಿರುವುದು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ತರಗತಿಗಳನ್ನು ಪುನರಾರಂಭಿಸಲು ಅಸಮರ್ಪಕ ನಿಯಮಗಳನ್ನು ಜಾರಿಗೆ ತರಲು ಹೊರಟಿರುವುದು, ಅಪಾಯದ ಪರಿಸ್ಥಿತಿಯಲ್ಲಿ SSLC ಹಾಗೂ PUC ಪರೀಕ್ಷೆಗಳನ್ನು ನಡೆಸಲು ಸರ್ಕಾರವು ನಿರ್ಧರಿಸಿರುವುದು ಹಾಗೂ ಖಾಸಗಿ ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಶುಲ್ಕವನ್ನು ಪಾವತಿಸಲು ಒತ್ತಡ ಹೇರುತ್ತಿರುವುದು ಸರಿಯಲ್ಲ.. ಅದೇ ರೀತಿ ಪ್ರಸ್ತುತ ವಿದ್ಯಾರ್ಥಿಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದು ಈ ಹಿನ್ನಲೆಯಲ್ಲಿ ಅವರು ಪಡೆದಂತಹ ಶೈಕ್ಷಣಿಕ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಅದೇ ರೀತಿ ಬಾಕಿ ಉಳಿದಿರುವ ವಿದ್ಯಾರ್ಥಿ ವೇತನಗಳನ್ನು ಶೀಘ್ರವೇ ಬಿಡುಗಡೆ ಮಾಡಬೇಕೆಂದು ಈ ಅಭಿಯಾನದ ಮೂಲಕ ಸರ್ಕಾರವನ್ನು ಕೋರಲಾಗಿದೆ. ಸರ್ಕಾರವು ವಿದ್ಯಾರ್ಥಿಗಳ ಪರ ತೀರ್ಮಾನಗಳನ್ನು ತೆಗೆದುಕೊಳ್ಳುವ ವಿಶ್ವಾಸವಿದೆ ಎಂದು ಶೌವಾದ್ ಗೂನಡ್ಕರವರು ತಿಳಿಸಿದ್ದಾರೆ.


Spread the love