ದ.ಕ. ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ಮೇ 3ರ ಬೆಳಗ್ಗೆ 6ರವರೆಗೆ ಮದ್ಯದಂಗಡಿಗಳನ್ನು ಮುಚ್ಚಲು ಆದೇಶ
ಮಂಗಳೂರು: ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆಯ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ದ.ಕ. ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ಮೇ 2ರಿಂದ ಮೇ 3ರ ಬೆಳಗ್ಗೆ 6 ಗಂಟೆಯ ವರೆಗೆ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚಲು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶಿಸಿದ್ದಾರೆ.
ಕೊಲೆಯಾದ ಸುಹಾಸ್ ಶೆಟ್ಟಿ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ವ್ಯಾಪ್ತಿಯವರಾಗಿದ್ದಾರೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಗಳಲ್ಲಿ ಪ್ರಕ್ಷುಬ್ಧ ಪರಿಸ್ಥಿತಿಯು ಬೂದಿ ಮುಚ್ಚಿದ ಕೆಂಡದಂತಿದೆ. ಆದ್ದರಿಂದ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇರುವುದರಿಂದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಂತೆ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ.
ಈ ಆದೇಶದನ್ವಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕಿನಾದ್ಯಂತ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚಲು ಹಾಗೂ ಎಲ್ಲಾ ವಿಧದ ಅಮಲು ಪದಾರ್ಥಗಳ ಮಾರಾಟವನ್ನು ನಿಷೇಧಿಸಲಾಗಿದೆ.