ದ.ಕ. ಜಿಲ್ಲೆಯಲ್ಲಿ ಭಾರೀ ಗುಡುಗು-ಮಿಂಚು ಸಹಿತ ಮಳೆ: ಸಿಡಿಲು ಬಡಿದು ಮನೆ ಜಖಂ

Spread the love

ದ.ಕ. ಜಿಲ್ಲೆಯಲ್ಲಿ ಭಾರೀ ಗುಡುಗು-ಮಿಂಚು ಸಹಿತ ಮಳೆ: ಸಿಡಿಲು ಬಡಿದು ಮನೆ ಜಖಂ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ಭಾರೀ ಗುಡುಗು-ಮಿಂಚು ಸಹಿತ ಮಳೆಯಾಗಿದ್ದು, ಸಿಡಿಲಿನ ಹೊಡೆತಕ್ಕೆ ಮನೆಯೊಂದು ಸಂಪೂರ್ಣ ಜಖಂಗೊಂಡ ಘಟನೆ ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಅನಿಲ್ದಡ್ಡದಲ್ಲಿ ನಡೆದಿದೆ.

ಮುಂಜಾನೆ ಸುಮಾರು 4 ಗಂಟೆಯ ವೇಳೆಗೆ ನಾಗೇಶ್ ಕುಲಾಲ್ ಎಂಬುವವರ ಮನೆಯ ಮೇಲೆ ಸಿಡಿಲು ಬಡಿದಿದೆ. ಸಿಡಿಲಿನ ತೀವ್ರತೆಗೆ ಮನೆಯ ಹಂಚು, ಗೋಡೆ ಹಾಗೂ ಕಿಟಕಿ ಗಾಜುಗಳು ಪುಡಿಪುಡಿಯಾಗಿದ್ದು, ಮನೆಗೆ ಭಾರೀ ಹಾನಿಯಾಗಿದೆ.

ಘಟನೆಯ ವೇಳೆ ಮನೆಯಲ್ಲಿದ್ದ ನಾಗೇಶ್ ಕುಲಾಲ್ ಅವರ ಪತ್ನಿ ಕುಶಲ ಅವರು ಅಸ್ವಸ್ಥರಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಿಲ್ಲೆಯ ವಿವಿಧೆಡೆ ಮುಂಜಾನೆ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಿದ್ದು, ಕೆಲವೆಡೆ ಸಿಡಿಲು ಹಾಗೂ ಮಳೆಯಿಂದ ಹಾನಿ ಸಂಭವಿಸಿರುವ ಕುರಿತು ವರದಿಯಾಗಿದೆ.


Spread the love
Subscribe
Notify of

0 Comments