ದ.ಕ. ಜಿಲ್ಲೆಯಲ್ಲಿ ಮೇ 27, 28ರಂದು ಅಂಗನವಾಡಿ, ಪಿಯು ಕಾಲೇಜುಗಳಿಗೆ ರಜೆ
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮೇ 27 ಮತ್ತು28ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಗಾಗಿ ಈ ಎರಡೂ ದಿನ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಮೇ 27 ಮತ್ತು 28ರಂದು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಸಿಬಿಎಸ್ಸಿ, ಪದವಿಪೂರ್ವ ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.