Spread the love
ದ.ಕ. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸೂಕ್ತ ಕ್ರಮಕ್ಕೆ ಪೊಲೀಸ್ ವರಿಷ್ಠಾಧಿಕಾರಿಗೆ ಯು.ಟಿ. ಖಾದರ್ ಸೂಚನೆ
ಮಂಗಳೂರು: ಬಜ್ಪೆ ಕಿನ್ನಿಪದವು ಪ್ರದೇಶದಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಬೇಕಾದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಭಾಧ್ಯಕ್ಷ ಯು.ಟಿ.ಖಾದರ್ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಗೃಹ ಇಲಾಖೆಯೊಂದಿಗೂ ಚರ್ಚೆ ನಡೆಸಿದ ಯು.ಟಿ ಖಾದರ್ ಅವರು, ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಲು ಬೇಕಾದ ಸೂಕ್ತ ಕ್ರಮ ಕೈಗೊಳ್ಳಲು ಸರಕಾರಕ್ಕೆ ಸೂಚನೆ ನೀಡಿದ್ದಾರೆ.
Spread the love