ದ.ಕ. ಜಿಲ್ಲೆಯ 38 ಕಡೆ ಆಯುಷ್ಮಾನ್ ಭಾರತ್-ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ ಸ್ಥಾಪನೆಗೆ 24.70 ಕೋ.ರೂ.ಮಂಜೂರು: ಸಂಸದ ಬ್ರಿಜೇಶ್ ಚೌಟ

Spread the love

ದ.ಕ. ಜಿಲ್ಲೆಯ 38 ಕಡೆ ಆಯುಷ್ಮಾನ್ ಭಾರತ್-ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ ಸ್ಥಾಪನೆಗೆ 24.70 ಕೋ.ರೂ.ಮಂಜೂರು: ಸಂಸದ ಬ್ರಿಜೇಶ್ ಚೌಟ

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ದ.ಕ.ಜಿಲ್ಲೆಯಲ್ಲಿ 38 ಕಡೆ ಆಯುಷ್ಮಾನ್ ಭಾರತ್-ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ ಸ್ಥಾಪನೆಗೆ 24.70 ಕೋ.ರೂ. ಅನುದಾನ ಮಂಜೂರಾಗಿದೆ ಎಂದು ದ.ಕ. ಸಂಸದ ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ಗ್ರಾಮೀಣ ಭಾಗದಲ್ಲಿ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಪಡಿಸುವ ಉದ್ದೇಶದಿಂದ ಪ್ರಧಾನಿ ಮೋದಿ ಅವರ ಅಆಏಐ ಯೋಜನೆಯಡಿ ಜಿಲ್ಲೆಯ ಬಹುತೇಕ ಎಲ್ಲ ತಾಲೂಕುಗಳಿಗೂ ಹೊಸ ಆಯುಷ್ಮಾನ್ ಭಾರತ್-ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ ಸ್ಥಾಪನೆಗೆ ಅನುದಾನ ಮಂಜೂರು ಮಾಡಲಾಗಿದೆ. ಪ್ರತಿಯೊಂದು ಆಯುಷ್ಮಾನ್ ಭಾರತ್ ಹೆಲ್ತ್ ಸೆಂಟರ್ ಸ್ಥಾಪನೆಗೂ ತಲಾ 65 ಲಕ್ಷ ರೂ. ಮಂಜೂರಾಗಿದೆ. ಅದರಡಿ ಸೂಕ್ತ ಕಟ್ಟಡ ಸಹಿತ ಅಗತ್ಯ ಮೂಲ ಸೌಕರ್ಯ ವ್ಯವಸ್ಥೆಗಳನ್ನು ಒದಗಿಸಲಾಗುತ್ತದೆ. ಈ ನಿಟ್ಟಿನಲ್ಲಿ ಶೀಘ್ರದಲ್ಲೇ 38 ಕಡೆಗಳಲ್ಲಿ ನೂತನ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ ಸ್ಥಾಪಿಸಲು ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಬ್ರಿಜೇಶ್ ಚೌಟ ಹೇಳಿದ್ದಾರೆ.

ಜಿಲ್ಲೆಯ 38 ಕಡೆ ಆಯುಷ್ಮಾನ್ ಭಾರತ್ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರದ ಸ್ಥಾಪನೆಯಿಂದ ಗ್ರಾಮೀಣ ಭಾಗದ ಆರೋಗ್ಯ ಸೇವೆಗಳಲ್ಲಿ ಸಾಕಷ್ಟು ಸುಧಾರಣೆಯಾಗಲಿದೆ. ಅಲ್ಲದೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಲ್ಲದ ಊರುಗಳಿಗೂ ಅಗತ್ಯ ಆರೋಗ್ಯ ಸೇವೆಗಳನ್ನು ಒದಗಿಸಲು ಈ ಕೇಂದ್ರಗಳು ನೆರವಾಗಲಿವೆ ಎಂದು ತಿಳಿಸಿದ್ದಾರೆ.

**38 ಕೇಂದ್ರಗಳು ಹೀಗಿವೆ:

*ಪುತ್ತೂರು ತಾಲೂಕಿನ ಕೈಕಂಬ, ಪಡ್ನೂರು, ನೆಟ್ಟಾರು, ಕುರಿಯ, ಕುಟ್ರುಪಾಡಿ, ನೆಕ್ಕಿಲಾಡಿ.

*ಸುಳ್ಯದ ಐನಕಿದು, ನೆಲ್ಲುರು ಕೆಮ್ರಾಜೆ, ತೋಡಿಕಾನ, ಸುಳ್ಯ-ಎ, ಸುಳ್ಯ-ಬಿ, ಸುಳ್ಯ-ಸಿ. ಸುಳ್ಯ-ಡಿ,

*ಬಂಟ್ವಾಳ ತಾಲೂಕಿನ ದೇವಸ್ಯಪಡೂರು, ಮಂಗಿಲಪದವು, ಮೂಡುಪಡುಕೋಡಿ, ಸರಪಾಡಿ, ವೀರಕಂಬ, ಸಜಿಪಪಡು, ವಿಟ್ಲ ಮುನ್ನೂರು (ಶಂಭೂರು), ಕುರಿಯಾಳ, ಪೊಳಲಿ.

*ಬೆಳ್ತಂಗಡಿ ತಾಲೂಕಿನ ಕುತ್ಲೂರು, ನಾಲ್ಕೂರು, ತೆಂಕಕರಂದೂರು, ಲಾಯಿಲಾ-ಎ, ನ್ಯಾಯತರ್ಪು, ಪುದುವೆಟ್ಟು.

*ಮಂಗಳೂರು ತಾಲೂಕಿನ ಕೆಂಜಾರು, ಮನ್ನಬೆಟ್ಟು, ಮೂಡುಶೆಡ್ಡೆ, ಕೊಲ್ಲೂರು.

*ಮೂಡುಬಿದಿರೆಯ ವಾಲ್ಪಾಡಿ, ಮಾರ್ಪಡಿ-ಎ, ಮಾರ್ಪಡಿ-ಬಿ, ತೋಕೂರು ಪ್ರಾಂತ-ಬಿ, ಪ್ರಾಂತ-ಸಿ.


Spread the love
Subscribe
Notify of

0 Comments
Inline Feedbacks
View all comments