ದ.ಕ.ಜಿಲ್ಲೆ: ಗುರುವಾರ ಸ್ವೀಕರಿಸಿದ 16 ಮಂದಿಯ ವರದಿ ನೆಗೆಟಿವ್

Spread the love

ದ.ಕ.ಜಿಲ್ಲೆ: ಗುರುವಾರ ಸ್ವೀಕರಿಸಿದ 16 ಮಂದಿಯ ವರದಿ ನೆಗೆಟಿವ್

ಮಂಗಳೂರು: ಕೊರೋನ ವೈರಸ್ ತಡೆಯುವ ನಿಟ್ಟಿನಲ್ಲಿ ದ.ಕ.ಜಿಲ್ಲಾಡಳಿತದ ನಿರ್ದೇಶನದ ಮೇರೆಗೆ ವೈದ್ಯಕೀಯ ತಂಡವು ಕಟ್ಟುನಿಟ್ಟಿನ ಆರೋಗ್ಯ ತಪಾಸಣೆ ಮಾಡುತ್ತಿದೆ. ಅದರಂತೆ ಗುರುವಾರ ಮತ್ತೆ 16 ಮಂದಿಯ ಗಂಟಲಿನ ದ್ರವವನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದೆ. ಈ ಮಧ್ಯೆ ಗುರುವಾರ ಸ್ವೀಕರಿಸಲ್ಪಟ್ಟ 16 ಮಂದಿಯ ವರದಿಯು ನೆಗೆಟಿವ್ ಆಗಿದೆ. ಇದು ದ.ಕ.ಜಿಲ್ಲೆಯ ಮಟ್ಟಿಗೆ ಸಮಾಧಾನಕರ ಅಂಶವಾಗಿದೆ.

ಗುರುವಾರ 73 ಮಂದಿಯ ಸ್ಕ್ರೀನಿಂಗ್ ಮಾಡಲಾಗಿದೆ. ಇದರೊಂದಿಗೆ ಈವರೆಗೆ 38,446 ಮಂದಿಯ ಸ್ಕ್ರೀನಿಂಗ್ ಮಾಡಿದಂತಾಗಿದೆ. ಈವರೆಗೆ 5,875 ಮಂದಿ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. ಇಎಸ್‌ಐ ಆಸ್ಪತ್ರೆಯಲ್ಲಿ 30 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 28 ದಿನದ ನಿಗಾ ಅವಧಿಯನ್ನು 300 ಮಂದಿ ಪೂರೈಸಿದ್ದಾರೆ.

ಈವರೆಗೆ 239ಯ ಮಂದಿಯ ಗಂಟಲಿನ ದ್ರವ ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಆ ಪೈಕಿ 9 ಪಾಸಿಟಿವ್ ಮತ್ತು 214 ನೆಗೆಟಿವ್ ಬಂದಿದೆ. ಇನ್ನೂ 16 ಮಂದಿಯ ವರದಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love