ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ , ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ

Spread the love

ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ , ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ

ಉಡುಪಿ: ದಕ್ಷಿಣ ಕನ್ನಡ ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ (ನಿ) ಇವರಿಂದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. “ಸಿ”ವರ್ಗದ ಸದಸ್ಯರ ಮಕ್ಕಳಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.85, ದ್ವಿತೀಯ ಪಿಯುಸಿ/ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ.80,ಅಂಕಗಳಿಸಿದ ವಿದ್ಯಾರ್ಥಿಗಳು ಮತ್ತು ಸಾಮಾನ್ಯ ವರ್ಗದವರಲ್ಲಿ ಎಸ್.ಎಸ್.ಎಲ್.ಸಿ. ಯಲ್ಲಿ ಶೇ.90, ದ್ವಿತೀಯ ಪಿಯುಸಿಯಲ್ಲಿ ಶೇ.85. ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ನೀಡಲು ಮುಕ್ತ ಅವಕಾಶ ಕಲ್ಪಿಸಲಾಗಿದೆ.

ದಿನಾಂಕ: 15.09.2020 ರೊಳಗೆ ಅರ್ಜಿ ನಮೂನೆಯನ್ನು ಪಡೆದುಕೊಂಡು ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಮೀನುಗಾರಿಕಾ ಪ್ರಾಥಮಿಕ ಸಹಕಾರಿ ಸಂಘಗಳು ಮತ್ತು ಫೆಡರೇಶನ್ ನ ಶಾಖಾ ಕಚೇರಿಗಳಿಂದ ಪಡೆದುಕೊಳ್ಳುವಂತೆ ಫೆಡರೇಶನಿನ ಅಧ್ಯಕ್ಷರಾದ  ಯಶ್ಪಾಲ್ ಎ. ಸುವರ್ಣರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


Spread the love