Home Mangalorean News Kannada News ಧರ್ಮಸ್ಥಳ ಮೂಲದ ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢವಾಗಿ ಮೃತ್ಯು

ಧರ್ಮಸ್ಥಳ ಮೂಲದ ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢವಾಗಿ ಮೃತ್ಯು

Spread the love

ಧರ್ಮಸ್ಥಳ ಮೂಲದ ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢವಾಗಿ ಮೃತ್ಯು

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬೊಳಿಯಾರ್ ನಿವಾಸಿ ಸುರೇಂದ್ರ ಮತ್ತು ಸಿಂಧೂದೇವಿ ದಂಪತಿ ಪುತ್ರಿ, ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22 ವರ್ಷ) ನಿಗೂಢವಾಗಿ ಮೃತಪಟ್ಟ ಘಟನೆ ಪಂಜಾಬ್ ನಲ್ಲಿ ಮೇ 17 ರಂದು ನಡೆದಿದೆ.

ಪಂಜಾಬಿನ ಎಲ್ ಪಿಯು ಪಗ್ವಾಡ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದು, ಕಳೆದ ಆರು ತಿಂಗಳ ಹಿಂದೆ ಏರೋಸ್ಪೇಸ್ ಇಂಜಿನಿಯರ್ ಆಗಿ ದಿಲ್ಲಿಯಲ್ಲಿ ಉದ್ಯೋಗದಲ್ಲಿದ್ದರು. ಮುಂದೆ ಜಪಾನ್ ಗೆ ಉದ್ಯೋಗಕ್ಕೆ ಹೋಗುವವರಿದ್ದು, ಪಂಜಾಬ್ ಎಲ್ ಪಿಯು ಪಗ್ವಾಡ ಕಾಲೇಜಿನಿಂದ ಸರ್ಟಿಫಿಕೇಟ್ ಪಡೆಯಲು ತೆರಳಿದ್ದರು. ಸರ್ಟಿಫಿಕೇಟ್ ಪಡೆದ ಕೂಡಲೇ ಮನೆಯವರಲ್ಲಿ ಕಾಲ್ ನಲ್ಲಿ ಮಾತನಾಡಿದ್ದರೆಂದು ತಿಳಿದು ಬಂದಿದೆ. ಇದಾದ ಬಳಿಕ ಈಕೆ‌ ನಿಗೂಢವಾಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ

ಪಂಜಾಬ್ ನ ಜಲಂದರ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕುಟುಂಬದವರು ಪಂಜಾಬ್ ಗೆ ಪ್ರಯಾಣ ಬೆಳೆಸಿದ್ದಾರೆ. ಹೆಚ್ಚಿನ ಮಾಹಿತಿಗಳು ಕುಟುಂಬದವರು ಪಂಜಾಬ್ ತಲುಪಿದ ಬಳಿಕವಷ್ಟೆ ತಿಳಿದು ಬರಬೇಕಾಗಿದೆ.


Spread the love

Exit mobile version