ಧಾರವಾಡ ಜಿಲ್ಲೆಯಲ್ಲಿ ಬುಧವಾರದಿಂದ ಜುಲೈ 24ರವರೆಗೂ ಸಂಪೂರ್ಣ ಲಾಕ್ ಡೌನ್   

Spread the love

ಧಾರವಾಡ ಜಿಲ್ಲೆಯಲ್ಲಿ ಬುಧವಾರದಿಂದ ಜುಲೈ 24ರವರೆಗೂ ಸಂಪೂರ್ಣ ಲಾಕ್ ಡೌನ್   

ಧಾರವಾಡ: ಧಾರವಾಡ ಜಿಲ್ಲೆಯಲ್ಲೂ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬುಧವಾರದಿಂದ ಜುಲೈ 24ರವರೆಗೂ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲು ನಿರ್ಧರಿಸಲಾಗಿದೆ.

ಕೊರೋನಾ ಸಂಬಂಧ ಮುಖ್ಯಮಂತ್ರಿಗಳ ಜೊತೆ 11 ಜಿಲ್ಲೆಗಳ ಜಿಲ್ಲಾಧಿಕಾರಿಗಳ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜಗದೀಶ್ ಶೆಟ್ಟರ್, ಈಗಾಗಲೇ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ಮಾಡಿ ಚೆರ್ಚೆ ನಡೆಸಲಾಗಿದೆ. ಎಲ್ಲರ ಅಭಿಪ್ರಾಯವೂ ಲಾಕ್ ಡೌನ್ ಮಾಡ್ಬೇಕು ಎಂದು ಸಲಹೆ ನೀಡಿದ್ದಾರೆ.ಹೀಗಾಗಿ ಮುಖ್ಯಮಂತ್ರಿ ಅವರಿಗೆ ವಿಡಿಯೋ ಕಾನ್ಪರೆನ್ಸ್ ನಲ್ಲಿ ಲಾಕ್ ಡೌನ್ ಮಾಡುವಂತೆ ಮನವಿ ಮಾಡಿದ್ದೇವೆ, ಮುಖ್ಯಮಂತ್ರಿ ಅವರು ಆಯಾಯ ಜಿಲ್ಲಾಡಳಿತ ಮತ್ತು ಉಸ್ತುವಾರಿ ಸಚಿವರಿಗೆ ಅಧಿಕಾರ ನೀಡಿದ್ದಾರೆ. ಹೀಗಾಗಿ ಕಾರಣ ಜುಲೈ 15 ಬೆಳಿಗ್ಗೆ 10 ರಿಂದ ಜುಲೈ 24 ರಾತ್ರಿ 8 ರ ವರೆಗೆ ಲಾಕ್ ಡೌನ್ ಮಾಡುವುದಾಗಿ ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.

ಹುಬ್ಬಳ್ಳಿ ಕಿಮ್ಸ್ ಗೆ ಚಿಕಿತ್ಸೆಗಾಗಿ ಬೇರೆ ಕಡೆಯಿಂದಲೂ ರೋಗಿಗಳು ಬರುವುದರಿಂದ ಕಿಮ್ಸ್ ಗೆ ಹೆಚ್ಚಿನ ಒತ್ತಡ ಹೆಚ್ಚಾಗುತ್ತಿದೆ. ಜನರಲ್ಲಿ ನಿರ್ಲಕ್ಷ ಭಾವ ಇದೆ, ಅಧಿಕಾರಿಗಳು ಮತ್ತು ನಾವು ಜಾಗೃತಿ ಮೂಡಿಸುವ ಕೆಲಸ ಮಾಡ್ತಾ ಇದ್ದಿವಿ.ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್ ಬಳಕೆ ಮಾಡಲಾರದಕ್ಕೆ ಕೊರೋನಾ ಹೆಚ್ಚುತ್ತಿದೆ. ಮದುವೆಯಲ್ಲಿ ಯಾರೂ ಸರಿಯಾಗಿ ಜಾಗೃತಿ ವಹಿಸ್ತಾ ಇಲ್ಲಾ, ಬಾಗಲಕೋಟೆಯಲ್ಲಿ ಈಗಾಗಲೇ ಸಾರ್ವಜನಿಕ ಸ್ಥಳದಲ್ಲಿ ಮದುವೆ ನಿಷೇಧ ಮಾಡಲಾಗಿದೆ. ಪ್ರಾರ್ಥನಾ ಮಂದಿರದಲ್ಲಿ ಕೂಡಾ ಸರಿಯಾಗಿ ಕ್ರಮವನ್ನು ಪಾಲಿಸ್ತಾ ಇಲ್ಲಾ. ಜನ ಸಾಮಾನ್ಯರು ಈ ಬಗ್ಗೆ ಹೆಚ್ಚಿನ ಜಾಗೃತಿ ವಹಿಸಬೇಕು ಎಂದು ಶೆಟ್ಟರ್ ಮನವಿ ಮಾಡಿಕೊಂಡರು.ಧಾರವಾಡ: ಧಾರವಾಡ ಜಿಲ್ಲೆಯಲ್ಲೂ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬುಧವಾರದಿಂದ ಜುಲೈ 24ರವರೆಗೂ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲು ನಿರ್ಧರಿಸಲಾಗಿದೆ.

ಕೊರೋನಾ ಸಂಬಂಧ ಮುಖ್ಯಮಂತ್ರಿಗಳ ಜೊತೆ 11 ಜಿಲ್ಲೆಗಳ ಜಿಲ್ಲಾಧಿಕಾರಿಗಳ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜಗದೀಶ್ ಶೆಟ್ಟರ್, ಈಗಾಗಲೇ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ಮಾಡಿ ಚೆರ್ಚೆ ನಡೆಸಲಾಗಿದೆ. ಎಲ್ಲರ ಅಭಿಪ್ರಾಯವೂ ಲಾಕ್ ಡೌನ್ ಮಾಡ್ಬೇಕು ಎಂದು ಸಲಹೆ ನೀಡಿದ್ದಾರೆ.ಹೀಗಾಗಿ ಮುಖ್ಯಮಂತ್ರಿ ಅವರಿಗೆ ವಿಡಿಯೋ ಕಾನ್ಪರೆನ್ಸ್ ನಲ್ಲಿ ಲಾಕ್ ಡೌನ್ ಮಾಡುವಂತೆ ಮನವಿ ಮಾಡಿದ್ದೇವೆ, ಮುಖ್ಯಮಂತ್ರಿ ಅವರು ಆಯಾಯ ಜಿಲ್ಲಾಡಳಿತ ಮತ್ತು ಉಸ್ತುವಾರಿ ಸಚಿವರಿಗೆ ಅಧಿಕಾರ ನೀಡಿದ್ದಾರೆ. ಹೀಗಾಗಿ ಕಾರಣ ಜುಲೈ 15 ಬೆಳಿಗ್ಗೆ 10 ರಿಂದ ಜುಲೈ 24 ರಾತ್ರಿ 8 ರ ವರೆಗೆ ಲಾಕ್ ಡೌನ್ ಮಾಡುವುದಾಗಿ ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.

ಹುಬ್ಬಳ್ಳಿ ಕಿಮ್ಸ್ ಗೆ ಚಿಕಿತ್ಸೆಗಾಗಿ ಬೇರೆ ಕಡೆಯಿಂದಲೂ ರೋಗಿಗಳು ಬರುವುದರಿಂದ ಕಿಮ್ಸ್ ಗೆ ಹೆಚ್ಚಿನ ಒತ್ತಡ ಹೆಚ್ಚಾಗುತ್ತಿದೆ. ಜನರಲ್ಲಿ ನಿರ್ಲಕ್ಷ ಭಾವ ಇದೆ, ಅಧಿಕಾರಿಗಳು ಮತ್ತು ನಾವು ಜಾಗೃತಿ ಮೂಡಿಸುವ ಕೆಲಸ ಮಾಡ್ತಾ ಇದ್ದಿವಿ.ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್ ಬಳಕೆ ಮಾಡಲಾರದಕ್ಕೆ ಕೊರೋನಾ ಹೆಚ್ಚುತ್ತಿದೆ. ಮದುವೆಯಲ್ಲಿ ಯಾರೂ ಸರಿಯಾಗಿ ಜಾಗೃತಿ ವಹಿಸ್ತಾ ಇಲ್ಲಾ, ಬಾಗಲಕೋಟೆಯಲ್ಲಿ ಈಗಾಗಲೇ ಸಾರ್ವಜನಿಕ ಸ್ಥಳದಲ್ಲಿ ಮದುವೆ ನಿಷೇಧ ಮಾಡಲಾಗಿದೆ. ಪ್ರಾರ್ಥನಾ ಮಂದಿರದಲ್ಲಿ ಕೂಡಾ ಸರಿಯಾಗಿ ಕ್ರಮವನ್ನು ಪಾಲಿಸ್ತಾ ಇಲ್ಲಾ. ಜನ ಸಾಮಾನ್ಯರು ಈ ಬಗ್ಗೆ ಹೆಚ್ಚಿನ ಜಾಗೃತಿ ವಹಿಸಬೇಕು ಎಂದು ಶೆಟ್ಟರ್ ಮನವಿ ಮಾಡಿಕೊಂಡರು.

Spread the love