ನಕ್ಸಲ್ ಲತಾ ವಶಕ್ಕೆ ಪಡೆದ ಉಪ್ಪಿನಂಗಡಿ ಪೊಲೀಸರು
ಉಪ್ಪಿನಂಗಡಿ: ನಕ್ಸಲ್ ಚಟುವಟಿಕೆಗಳ ಆರೋಪ ಎದುರಿಸುತ್ತಿರುವ ಮುಂಡಗಾರು ಲತಾ ಅವರನ್ನು 2018ರ ಪ್ರಕರಣವೊಂದರ ವಿಚಾರಣೆಗಾಗಿ ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
2018ರಲ್ಲಿ ಅಡ್ಡಹೊಳೆ ಎಂಬಲ್ಲಿ ಪಡಿತರ ಸಾಮಗ್ರಿಗಳನ್ನು ಪಡೆದುಕೊಂಡು ಬಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುವ ಉದ್ದೇಶದಿಂದ ಕಡಬ ನ್ಯಾಯಾಲಯದ ಮೂಲಕ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗಾಗಿ ಕರೆತರುತ್ತಿದ್ದಾರೆ ಎಂದು ತಿಳಿದುಬಂದಿದೆ.
ಬೆಳ್ತಂಗಡಿ ಪ್ರಭಾರ ಡಿವೈಎಸ್ಪಿ ಇ. ಮಂಜುನಾಥ್ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
