ನರಿಂಗಾನ : ಕಸ ನಿರ್ವಹಣೆ ಮಾಹಿತಿ ಕಾರ್ಯಕ್ರಮ
ಮಂಗಳೂರು: ನರಿಂಗಾನ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಡಿಸೆಂಬರ್ 23 ರಂದು ಉದ್ಘಾಟನೆಗೊಳ್ಳಲಿರುವ ಸ್ವಚ್ಛ ಸಂಕೀರ್ಣದ ಕಾರ್ಯಾಚರಣೆ ನಿಮಿತ್ತ ಮುಡಿಪು ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಮನೆಗಳು ಹಾಗೂ ವಾಣಿಜ್ಯ ಕಟ್ಟಡದ ಮಾಲೀಕರಿಗೆ ಹಸಿ ಕಸ ಹಾಗೂ ಒಣ ಕಸ ನಿರ್ವಹಣೆ ಮಾಡುವ ಕುರಿತು ಮಾಹಿತಿ ನೀಡಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು.
ಗ್ರಾಮ ಪಂಚಾಯತ್ ಅಧ್ಯಕ್ಷ ಮಹಮ್ಮದ್ ನವಾಝ್ ಮಾತನಾಡಿ, ಪಂಚಾಯತ್‍ನಲ್ಲಿ ಪೂರ್ಣ ಪ್ರಮಾಣದ ಸ್ವಚ್ಛ ಸಂಕೀರ್ಣ ನಿರ್ಮಾಣಗೊಂಡಿದ್ದು, ಗ್ರಾಮದ ಮನೆ, ಶಾಲೆ, ಕಾಲೇಜು, ವಾಣಿಜ್ಯ ಮಳಿಗೆಗಳಿಂದ ಹಸಿ ಹಾಗೂ ಒಣ ಕಸ ಸಂಗ್ರಹಿಸಲಾಗುತ್ತದೆ ಎಂದು ಹೇಳಿದರು. ಈ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಕರಪತ್ರ ಬಿಡುಗಡೆ ಮಾಡಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ವೇತಾ, ಮುಡಿಪು ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ಸಂಯೋಜಕಿ ತನುಜಾ, ಹಾಗೂ ಎನ್.ಎಸ್.ಎಸ್ ವಿದ್ಯಾರ್ಥಿಗಳು, ಸದಸ್ಯರಾದ ಸಲೀಂ ಹಾಗೂ ಜಿಲ್ಲಾ ಸ್ವ.ಭಾ.ಮಿ (ಗ್ರಾ) ಸಮಾಲೋಚಕ ಡೊಂಬಯ್ಯ ಇಡ್ಕಿದು, ಸಂಜೀವಿನಿ ಒಕ್ಕೂಟದ ಸದಸ್ಯರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು. ಕಾರ್ಯದರ್ಶಿ ನಳಿನಿ ಸ್ವಾಗತಿಸಿ ವಂದಿಸಿದರು.













