ನವರಾತ್ರಿ ಹಬ್ಬ: ಮದ್ಯದಂಗಡಿ ಮುಚ್ಚಲು ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಆದೇಶ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ನವರಾತ್ರಿ ಹಬ್ಬವನ್ನು ಆಚರಿಸಲಿದ್ದು, ಈ ಹಬ್ಬದ ಸಮಯದಲ್ಲಿ ಜಿಲ್ಲೆಯಲ್ಲಿ ಶಾರದಾ ಮೂರ್ತಿಯ ವಿಗ್ರಹಗಳನ್ನು ತಯಾರಿಸಿದ ಸ್ಥಳಗಳಿಂದ ವಿಜೃಂಭಣೆಯಿಂದ ಮೆರವಣಿಗೆಯಲ್ಲಿ ತಂದು ಪ್ರತಿಷ್ಠಾಪನೆ ಮಾಡಿ ಭಜನೆ, ಆರ್ಕೆಸ್ಟ್ರಾ, ವಾದ್ಯಗೋಷ್ಟಿ, ಧಾರ್ಮಿಕ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದೆ. ನಂತರ ನಿಗದಿತ ದಿನದಂದು ಶಾರದಾ ಮೂರ್ತಿಯ ವಿಸರ್ಜನಾ ಮೆರವಣಿಗೆಯು ಪ್ರತಿಷ್ಠಾಪನೆ ಸ್ಥಳದಿಂದ ಭವ್ಯ ಮೆರವಣಿಗೆಯಲ್ಲಿ ಟ್ಯಾಬ್ಲೋ, ಚೆಂಡೆ, ಮುಂತಾದ ಸ್ತಬ್ಧ ಚಿತ್ರಗಳೊಂದಿಗೆ ಸಾಗಿ ನಂತರ ಬಾವಿ, ಕೆರೆ, ನದಿಗಳಲ್ಲಿ ವಿಸರ್ಜನೆ ನಡೆಸಲಿರುತ್ತಾರೆ ಹಾಗೂ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಲಿದ್ದು, ಈ ವೇಳೆ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆಗಳಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಅಗತ್ಯವಿರುವುದರಿಂದ ಶೋಭಾಯಾತ್ರೆ ಮೆರವಣಿಗೆ ಸಾಗುವ ಪ್ರದೇಶಗಳಲ್ಲಿ ನಿಗದಿತ ಅವಧಿಯಲ್ಲಿ ಪೆÇಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿನ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿನ ಬಾರ್ ಮತ್ತು ವೈನ್ ಶಾಪ್ಗಳು ಸೇರಿದಂತೆ ಎಲ್ಲಾ ಪ್ರಕಾರದ ಮದ್ಯದಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯ ಮಾರಾಟ ಮಾಡದಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ.