ನವೆಂಬರ್ 19: ಉಡುಪಿ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ

Spread the love

ನವೆಂಬರ್ 19: ಉಡುಪಿ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ

ಉಡುಪಿ : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ನವೆಂಬರ್ 19 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು, ಅಂದು ಮಧ್ಯಾಹ್ನ 2.30 ಕ್ಕೆ ಕರ್ನಾಟಕ ಸರ್ಕಾರಿ ಕೂಸಮ್ಮ ಶಂಭು ಶೆಟ್ಟಿ ಮೆಮೋರಿಯಲ್ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡದ ಉದ್ಘಾಟನೆ ಹಾಗೂ ಉಡುಪಿ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುವ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸುವರು.

ಮಧಾಹ್ನ 3.45 ಕ್ಕೆ ಶಾಮಿಲಿ ಯಲ್ಲಿ , ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಉಡುಪಿ ಮೋಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಹಾಗೂ ಉಡುಪಿ ಜಿಲ್ಲಾ ಮೀನುಗಾರರ ಸಹಕಾರಿ ಸಂಘ ಇವರ ಸಹಯೋಗದೊಂದಿಗೆ ಮಹಿಳಾ ಮೀನುಗಾರರ ಸಮಾವೇಶ ಉದ್ಘಾಟನೆ ಮತ್ತು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ವತಿಯಿಂದ ಕುಂದಾಪುರ ತಾಲೂಕಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ನೂರು ಹಾಸಿಗೆಗಗಳ ಸುಸಜ್ಜಿತ ಹೆರಿಗೆ ವಾರ್ಡ್ ನ ಶಿಲಾನ್ಯಾಸ ಹಾಗೂ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸುವರು.


Spread the love