ನಾಳೆಯಿಂದ ರಾಜ್ಯದಲ್ಲಿ ಲಾಕ್ ಡೌನ್ ಭಾಗಶಃ ಸಡಿಲ: ಯಾವುದಕ್ಕೆ ವಿನಾಯಿತಿ? ಇಲ್ಲಿದೆ ಮಾಹಿತಿ

Spread the love

ನಾಳೆಯಿಂದ ರಾಜ್ಯದಲ್ಲಿ ಲಾಕ್ ಡೌನ್ ಭಾಗಶಃ ಸಡಿಲ: ಯಾವುದಕ್ಕೆ ವಿನಾಯಿತಿ? ಇಲ್ಲಿದೆ ಮಾಹಿತಿ

ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಕಳೆದ ಒಂದು ತಿಂಗಳಿಂದ ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದ್ದು, ಇದರಿಂದ ಆರ್ಥಿಕ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇದೀಗ ರಾಜ್ಯ ಸರ್ಕಾರ ನಾಳೆಯಿಂದ ಭಾಗಶಃ ಲಾಕ್ ಡೌನ್ ಸಡಿಲಗೊಳಿಸಲು ನಿರ್ಧರಿಸಿದ್ದು, ಆರ್ಥಿಕ ಚಟುವಟಿಕೆಗಳು ಮತ್ತೆ ಆರಂಭವಾಗಲಿವೆ.

ರಾಜ್ಯ ಸರ್ಕಾರ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಲಾಕ್‌ ಡೌನ್ ಸಡಿಲಿಕೆ ಮಾಡಿದ್ದು, ಹೊಸ ಮಾರ್ಗಸೂಚಿ ಪ್ರಕಟಿಸಿದೆ.

ಹೊಸ ಮಾರ್ಗಸೂಚಿ ಪ್ರಕಾರ ರಾಜ್ಯದಲ್ಲಿ ಅತೀ ಹೆಚ್ಚು ಕೊವಿಡ್​​-19 ಪಾಸಿಟಿವ್​​ ಪ್ರಕರಣಗಳು ಕಾಣಸಿಕೊಂಡಿರುವ ಕಂಟೇನ್ ನ್ಮೆಂಟ್‌ ಝೋನ್‌ ಹೊರತುಪಡಿಸಿ ಉಳಿದ ಭಾಗಗಳಲ್ಲಿ ಲಾಕ್​​ಡೌನ್ ನಿರ್ಬಂಧ‌ ಸಡಿಲಗೊಳಸಲಾಗಿದೆ.

ಡಾಬಾ, ಕಟ್ಟಡ ನಿರ್ಮಾಣ ಕಾಮಗಾಗಿ, ಕೊರಿಯರ್‌ ಸೇವೆ, ಲಾರಿ ರಿಪೇರಿ ಮಾಡುವ ಗ್ಯಾರೇಜ್ ಸೇರಿದಂತೆ‌ ಕೆಲವೊಂದು ಅಗತ್ಯ ಸೇವೆಗಳಿಗೆ ಲಾಕ್​​ಡೌನ್‌ ನಿಂದ ವಿನಾಯಿತಿ ನೀಡಲಾಗಿದೆ.

ಪೇಪರ್, ರಸಗೊಬ್ಬರ, ಎಪಿಎಂಸಿ ಮಾರ್ಕೆಟ್ ಸಂಪೂರ್ಣ ತೆರೆಯಲಿವೆ. ಕೃಷಿ ಮತ್ತು ಮೀನುಗಾರಿಕೆ ವಲಯಕ್ಕೆ ಸಂಪೂರ್ಣ ಅನುಮತಿ ನೀಡಿದೆ. ಕೃಷಿ ನೀರಾವರಿಗೆ ಯಾವುದೇ ನಿರ್ಬಂಧ ಇಲ್ಲ ಎಂದು ತಿಳಿಸಲಾಗಿದೆ.

ಕಟ್ಟಡ ನಿರ್ಮಾಣ, ಕಟ್ಟಡ ಕಾಮಗರಿಗಳಿಗೆ ಅನುಮತಿ ನೀಡಲಾಗಿದ್ದು, ಟೀ ಕಾಫಿ ಪ್ಲಾಂಟೇಷನ್​​ಗೆ ಅವಕಾಶ ಕಲ್ಪಿಸಲಾಗಿದೆ. ಪಾಸ್ ಇದ್ದವರಿಗಷ್ಟೇ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ರಸ್ತೆ ಕಾಮಗಾರಿಗೆ ಅವಕಾಶ ನೀಡಲಾಗಿದೆ.

ಪಶುಸಂಗೋಪನೆ, ಬ್ಯಾಂಕುಗಳ ನಿರ್ವಹಣೆ ಮತ್ತು ಹೊಟೆಲ್​ಗಳಲ್ಲಿ ಪಾರ್ಸೆಲ್ ಸೇವೆಗಳಿಗೆ ಅವಕಾಶ ನೀಡಲಾಗಿದೆ.
ಮೆಟ್ರೋ ರೈಲು ಸಂಚಾರಕ್ಕೆ ಅವಕಾಶ ಇಲ್ಲ. ಶಾಪಿಂಗ್ ಮಾಲ್, ಸಿನಿಮಾ ಥಿಯೇಟರ್ ತೆರೆಯುವುದಿಲ್ಲ. ಸದ್ಯಕ್ಕೆ ಶಾಲಾ ಕಾಲೇಜು ತೆರೆಯುವಂತಿಲ್ಲ. ಟ್ಯಾಕ್ಸಿ ಆಟೋ ಬಸ್ ಸಂಚಾರ ಬಂದ್ ಮುಂದುವರಿಯಲಿವೆ


Spread the love