ನಿರಂತರ ಮಳೆ : ನಾಳೆ (ಜು.24) ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜಿಗೆ ರಜೆ ಘೋಷಣೆ
ಉಡುಪಿ: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 24 ರಂದು ಗುರುವಾರ (ನಾಳೆ) ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಡ ಶಾಲೆಗಳಿಗೆ, ಪದವಿ ಪೂರ್ವ ಕಾಲೇಜು ಹಾಗೂ ಐಟಿಐ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಆದೇಶ ಹೊರಡಿಸಿದ್ದಾರೆ.