ನೀಟ್ ಪ್ರತಿಭಟನೆ ಕುರಿತು ಅವಹೇಳನಕಾರಿ, ಧಾರ್ಮಿಕ ಪ್ರಚೋದನೆ ಬರಹ: ಆರೋಪಿ ಬಂಧನ

Spread the love

ನೀಟ್ ಪ್ರತಿಭಟನೆ ಕುರಿತು ಅವಹೇಳನಕಾರಿ, ಧಾರ್ಮಿಕ ಪ್ರಚೋದನೆ ಬರಹ: ಆರೋಪಿ ಬಂಧನ

ವಿಟ್ಲ: ನೀಟ್ (NEET) ಪ್ರತಿಭಟನೆಗೆ ಸಂಬಂಧಿಸಿದಂತೆ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಹಾಗೂ ಸಮುದಾಯಗಳ ನಡುವೆ ವೈಮನಸ್ಸು ಮೂಡಿಸುವ ಉದ್ದೇಶದಿಂದ ಅವಹೇಳನಕಾರಿ ಬರಹವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಆರೋಪದಡಿ ಬಂಟ್ವಾಳದ ವ್ಯಕ್ತಿಯೊಬ್ಬನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ದೂರಿನ ಪ್ರಕಾರ, ದೂರುದಾರರು ‘KFC KHANDIGA’ ಎಂಬ ವಾಟ್ಸಾಪ್ ಗುಂಪಿನ ಸದಸ್ಯರಾಗಿದ್ದು, ಜುಲೈ 23ರಂದು ಗುಂಪಿನಲ್ಲಿ ಬಂದಿದ್ದ ಸ್ಕ್ರೀನ್‌ಶಾಟ್‌ ಪರಿಶೀಲಿಸಿದಾಗ, ಅದರಲ್ಲಿ ಸಮುದಾಯಗಳ ನಡುವೆ ದ್ವೇಷ ಮತ್ತು ವೈಮನಸ್ಸು ಉಂಟುಮಾಡುವ ಹಾಗೂ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಬರಹಗಳಿರುವುದು ಕಂಡುಬಂದಿದೆ.

ಮತ್ತಷ್ಟು ಪರಿಶೀಲನೆ ನಡೆಸಿದಾಗ, ಬಂಟ್ವಾಳ ಕೇಪು ನಿವಾಸಿ ಭರತ್ (36) ಎಂಬಾತ ಇದೇ ಬರಹವನ್ನು ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ಹಂಚಿಕೊಂಡಿರುವುದು ಬೆಳಕಿಗೆ ಬಂದಿದೆ.

ಈ ಸಂಬಂಧ ದೂರುದಾರರು ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 160/2026ರಡಿ ಭಾರತೀಯ ನ್ಯಾಯ ಸಂಹಿತೆ (BNS) 2023ರ **ಕಲಂ 197(1)(a), 197(1)(c) ಹಾಗೂ 353(2)**ರಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿತ ಭರತ್ನನ್ನು ಬಂಧಿಸಿದ್ದು, ವಿಚಾರಣೆ ಮುಂದುವರಿದಿದೆ.


Spread the love
Subscribe
Notify of

0 Comments