ನೂತನ ಪೊಲೀಸ್ ಆಯುಕ್ತರಿಗೆ ದಕ ಜಿಲ್ಲಾ ಯುವ ಜೆಡಿಎಸ್ ವತಿಯಿಂದ ಸ್ವಾಗತ

Spread the love

ನೂತನ ಪೊಲೀಸ್ ಆಯುಕ್ತರಿಗೆ ದಕ ಜಿಲ್ಲಾ ಯುವ ಜೆಡಿಎಸ್ ವತಿಯಿಂದ ಸ್ವಾಗತ

ಮಂಗಳೂರು: ದಕ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಅವರ  ನೇತೃತ್ವದಲ್ಲಿ ನೂತನ ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಹಾಗೂ ದಕ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಅವರನ್ನು ಭೇಟಿಯಾಗಿ ಜಿಲ್ಲೆಗೆ ಸ್ವಾಗತಿಸಲಾಯಿತು.

ಈ ವೇಳೆ ನಗರ ಪೋಲಿಸ್ ಕಮಿಷನರೇಟ್ ವ್ಯಾಪ್ತಿ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ತಮ್ಮ ವತಿಯಿಂದ ಎಲ್ಲಾ ರೀತಿಯ ಸಹಕಾರವನ್ನು ನೀಡಲಾಗುವುದು ಮತ್ತು ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಮನವಿ ಮಾಡಿದರು.

ಯುವ ಜನತಾದಳ (ಜಾ) ದ.ಕ ಜಿಲ್ಲೆ ಇದರ ಮಂಗಳೂರು ಉತ್ತರ ವಿಧಾನಸಭಾ ಅಧ್ಯಕ್ಷ ಹಾಗು ಜಿಲ್ಲಾ ಸಂಘಟನಾ ಉಸ್ತುವಾರಿಯಾದ ರತೀಶ್ ಕರ್ಕೇರ, ಜಿಲ್ಲಾ ಹಿರಿಯ ಉಪಾಧ್ಯಕ್ಷ ಮೊಹಮ್ಮದ್ ಅಸಿಫ್ ,ಮಂಗಳೂರು ದಕ್ಷಿಣ ಕ್ಷೇತ್ರ ಅಧ್ಯಕ್ಷ ಸತ್ತಾರ್ ಬಂದರು,  ಹಾಗು ಯುವ ಪಧಾದಿಕಾರಿಗಳಾದ ನಿತೇಶ್ ಪೂಜಾರಿ, ಸುಶಾಂತ್, ಆದರ್ಶ್ ಸುಧಾಕರ್, ಅಭಿಷೇಕ್ ಮುಂತಾದವರು ಪಾಲ್ಗೊಂಡಿದ್ದರು


Spread the love