ನೆರೆ ಸಂದರ್ಭ ಅತ್ಯುತ್ತಮ ಕಾರ್ಯನಿರ್ವಹಣೆ  – ಪತ್ರಕರ್ತರ ಸಂಘದಿಂದ ಡಿಸಿಗೆ ಅಭಿನಂದನೆ

Spread the love

ನೆರೆ ಸಂದರ್ಭ ಅತ್ಯುತ್ತಮ ಕಾರ್ಯನಿರ್ವಹಣೆ  – ಪತ್ರಕರ್ತರ ಸಂಘದಿಂದ ಡಿಸಿಗೆ ಅಭಿನಂದನೆ

ಮಂಗಳೂರು: ದಕ್ಷಿಣ ಕನ್ನಡ ಜಿಯಲ್ಲಿ ಸಂಭವಿಸಿದ ಪ್ರವಾಹ ಪರಿಸ್ಥಿತಿಯನ್ನು ಎದುರಿಸಿ ಹಗಲು ರಾತ್ರಿ ಎನ್ನದೆ ನೆರೆ ಸಂತ್ರಸ್ತರ ಸಂಕಷ್ಟಗಳಿಗೆ ಸ್ಪಂದಿಸಿದ ದಕ್ಷಿಣ ಕನ್ನಡ ಜಿಧಿಕಾರಿ ಶಶಿಕಾಂತ ಸೆಂಥಿಲ್ ಅವರನ್ನು ದಕ್ಷಿಣ ಕನ್ನಡ ಜಿ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಶುಕ್ರವಾರ ಅಭಿನಂದಿಸಲಾಯಿತು.

ಪ್ರವಾಹದಿಂದ ಬೆಳ್ತಂಗಡಿ ತಾಲೂಕಿನ ಅನೇಕ ಗ್ರಾಮಗಳಿಗೆ ಭಾರಿ ಹಾನಿಯಾಗಿದೆ. ನೂರಾರು ಮಂದಿ ಮನೆ, ಆಸ್ತಿಗಳನ್ನು ಕಳೆದುಕೊಂಡಿದ್ದಾರೆ. ಇಂತಹಾ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸತತ ಒಂದು ವಾರಗಳ ಕಾಲ ಈ ಪ್ರದೇಶದ ಉಸ್ತುವಾರಿ ವಹಿಸಿಕೊಂಡು ಅಧಿಕಾರಿಗಳಿಗೆ ನಿರ್ದೇಶನ ನೀಡುವ ಮೂಲಕ ಸಮಗ್ರ ಪರಿಹಾರ ಕಾರ್ಯ ನಡೆಸಿದ್ದರು. ಅಲ್ಲದೆ ಸಂತ್ರಸ್ತರ ಕಷ್ಟಗಳಿಗೆ ತಕ್ಷಣ ಸ್ಪಂದಿಸುವ ಕೆಲಸವನ್ನು ಮಾಡಿದ್ದರು.

ಈ ಬಾರಿ ಮಳೆಗಾಲಕ್ಕೆ ಮುನ್ನವೇ ಪ್ರಾಕೃತಿಕ ವಿಕೋಪದಿಂದ ಎದುರಾಗಬಹುದಾದ ಸಮಸ್ಯೆಗಳ ಅಪಾಯದ ಕುರಿತು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿತ್ತು. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಜೂನ್ ತಿಂಗಳಿನಲ್ಲಿ ಮಂಗಳೂರಿಗೆ ಆಗಮಿಸಿತ್ತು. 10 ಬೋಟ್ ಗಳನ್ನೂ ಕೂಡಾ ಸಿದ್ಧಪಡಿಸಲಾಗಿತ್ತು. ಹೀಗಾಗಿ ಭಾರಿ ಪ್ರಮಾಣದ ನೆರೆ ಬಂದರೂ ಹೆಚ್ಚಿನ ಸಾವು ನೋವುಗಳು ಆಗದಂತೆ ಕ್ರಮ ಕೈಗೊಳ್ಳಲು ಸಹಾಯಕವಾಯಿತು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದರು.

ಡೆಂಗ್ಯೂ ಜ್ವರ ಸೇರಿದಂತೆ ಇನ್ನಿತರ ಸಾಂಕ್ರಾಮಿಕ ರೋಗಗಳು ಹರಡದಂತೆ ಸಾರ್ವಜನಿಕರಲ್ಲಿ ಜಾಗ್ರತಿ ಮೂಡಿಸುವ ಕೆಲಸ ಇನ್ನೂ ಆಗಬೇಕಾಗಿದೆ. ತಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆಯೂ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಅವರು ಹೇಳಿದರು.

ಪತ್ರಕರ್ತ ರಾಜೇಶ್ ಮನೆಗೆ ಹಾನಿ, ಪರಿಹಾರಕ್ಕೆ ಮನವಿ:
ದಕ್ಷಿಣ ಕನ್ನಡ ಜಿ ಕಾರ್ಯನಿರತ ಪತ್ರಕರ್ತರ ಸಂಘದ ಜಿ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಟಿವಿ 9 ವೀಡಿಯೊ ಜರ್ನಲಿ ರಾಜೇಶ್ ಅವರ ಮನೆಗೆ ಪ್ರವಾಹದಲ್ಲಿ ತೀವ್ರ ಹಾನಿ ಉಂಟಾಗಿದ್ದು ಅವರ ಮನೆ ವಾಸಕ್ಕೆ ಅಯೋಗ್ಯವಾಗಿದೆ. ಈ ಹಿನ್ನೆಲೆಯಲ್ಲಿ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ದಕ್ಷಿಣ ಕನ್ನಡ ಜಿ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಧಿಕಾರಿ ಶಶಿಕಾಂತ್ ಸೆಂಥಿಲ್‌ಗೆ ಮನವಿ ಸಲ್ಲಿಸಲಾಯಿತು.

ಬೆಳ್ತಂಗಡಿಯಲ್ಲಿ ಉಂಟಾದ ಪ್ರವಾಹದಲ್ಲಿ ಸಿಲುಕಿ ರಾಜೇಶ್ ಅವರ ಕಿಲ್ಲೂರಿನ ಮನೆಗೆ ತೀವ್ರ ಹಾನಿ ಉಂಟಾಗಿತ್ತು. ಮನವಿಗೆ ಸ್ಪಂದಿಸಿದ ಜಿಧಿಕಾರಿಗಳು 5 ಲಕ್ಷ ರೂಪಾಯಿ ಪರಿಹಾರದ ಭರವಸೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಜಿ ಕಾರ್ಯಕಾರಿ ಸಮಿತಿ ಸದಸ್ಯರಾದ ಆರ್.ಸಿ.ಭಟ್, ಭಾಸ್ಕರ್ ರೈ ಕಟ್ಟ ಉಪಸ್ಥಿತರಿದ್ದರು.


Spread the love