ನೇಜಾರು ಹತ್ಯಾಕಾಂಡ ಭೇದಿಸಿದ ಪೊಲೀಸರ ಕಾರ್ಯ ಶ್ಲಾಘನೀಯ – ಮಹಮ್ಮದ್ ಸಲಾಂ

Spread the love

ನೇಜಾರು ಹತ್ಯಾಕಾಂಡ ಭೇದಿಸಿದ ಪೊಲೀಸರ ಕಾರ್ಯ ಶ್ಲಾಘನೀಯ – ಮಹಮ್ಮದ್ ಸಲಾಂ

ಉಡುಪಿ: ಜಿಲ್ಲೆಯ ಇತಿಹಾಸದಲ್ಲೇ ನೇಜಾರು ತೃಪ್ತಿ ಲೇಔಟ್ ನಲ್ಲಿ ಅತ್ಯಂತ ಕ್ರೂರ ರೀತಿಯಲ್ಲಿ ನಡೆದ ಒಂದೇ ಕುಟುಂಬದ ನಾಲ್ಕು ಮಂದಿಯ ಅಮಾನುಷ ಹತ್ಯೆ ನಾಗರಿಕ ಸಮಾಜವನ್ನು ಬೆಚ್ಚಿ ಬೀಳಿಸಿದೆ. ಪೊಲೀಸ್ ಇಲಾಖೆ ಈ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿ ಸಿಸಿ ಟಿವಿ ಹಾಗೂ ಇನ್ನಿತರ ಮೂಲಗಳ ಜಾಡು ಹಿಡಿದು ಕೊಲೆ ಆರೋಪಿಯನ್ನು ಬಂಧಿಸಿರುವುದು ಶ್ಲಾಘನೀಯ ಎಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಸಲಾಂ ಹೇಳಿದ್ದಾರೆ.

ಇಡೀ ಕರಾವಳಿಯನ್ನು ಬೆಚ್ಚಿಬೀಳಿಸಿದ ಪ್ರಕರಣದಿಂದಾಗಿ ಜನತೆ ಭಯದಲ್ಲಿ ಬದುಕುವ ವಾತಾವರಣವನ್ನು ಸೃಷ್ಠಿ ಮಾಡಿತ್ತು. ಜಿಲ್ಲೆಯ ದಕ್ಷ ಪೋಲಿಸ್ ವರಿಷ್ಠಾಧಿಕಾರಿಯಾಗಿರುವ ಡಾ. ಅರುಣ್ ಕೆ ಅವರು ಘಟನೆ ನಡೆದ ಮಾಹಿತಿ ಲಭಿಸಿದ ತಕ್ಷಣ ತಮ್ಮ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಆಗಮಿಸಿ ಪ್ರಕರಣದ ಕುರಿತು ಮಾಹಿತಿ ಪಡೆದು 5 ತನಿಖಾ ತಂಡಗಳನ್ನು ರಚಿಸಿ ಘಟನೆ ನಡೆದ ಮೂರು ದಿನಗಳ ಒಳಗಡೆ ಆರೋಪಿಯ ಜಾಡನ್ನು ಹುಡುಕಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ

ಪೊಲೀಸರ ಪರಿಣಾಮಕಾರಿ ಕಾರ್ಯಾಚರಣೆಗೆ ಮೆಚ್ಚುಗೆ ಸೂಚಿಸುವ ಜೊತೆಗೆ ಮುಂದಿನ ದಿನಗಳಲ್ಲಿ ಇಂತಹ ಭೀಭತ್ಸ ಘಟನೆಗಳು ಶಾoತಿ ಪ್ರಿಯರ ಜಿಲ್ಲೆ ಉಡುಪಿಯಲ್ಲಿ ಮರುಕಳಿಸದಂತೆ ಸಂಬಂಧಪಟ್ಟ ಇಲಾಖೆಗಳು ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ರೂಪಿಸುವುದು ಸೂಕ್ತ. ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸ್ ಸಿಬಂದಿಗಳ ಪಾತ್ರವನ್ನು ಮುಕ್ತ ಕಂಠದಿಂದ ಶ್ಲಾಘಿಸುವುದಾಗಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love