ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಮಂಗಳೂರು: ಪ್ರಕರಣವೊಂದರಲ್ಲಿ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಸ್ತಗಿರಿ ವಾರಂಟ್ ಆಧಾರದ ಮೇಲೆ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಬೆಂಗ್ರೆಯ ರೆಹಮತ್ ಮಂಜೀಲ್ ನಿವಾಸಿ ಅಬ್ದುಲ್ ಖಾದರ್ ಅವರ ಪುತ್ರ ಮಹಮ್ಮದ್ ಅನ್ಸರ್ ಅಲಿಯಾಸ್ ಬೊಡ್ಡ ಅನ್ಸರ್ (35) ಎಂಬಾತನ ವಿರುದ್ಧ ರಕ್ಷಣಾ ಪೊಲೀಸ್ ಠಾಣೆಯಲ್ಲಿ ಆ.ಕ್ರ. ನಂ. 211/2018ರಲ್ಲಿ ಭಾರತೀಯ ದಂಡ ಸಂಹಿತೆ (IPC) ಕಲಂ 341, 324, 326 ಹಾಗೂ 504ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯು ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಆತನ ವಿರುದ್ಧ ದಸ್ತಗಿರಿ ವಾರಂಟ್ ಜಾರಿಯಾಗಿತ್ತು. ಈ ಹಿನ್ನೆಲೆಯಲ್ಲಿ 2026ರ ಆಗಸ್ಟ್ 21ರಂದು ಆರೋಪಿಯನ್ನು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ನ್ಯಾಯಾಲಯವು ಆರೋಪಿಗೆ ಸೆಪ್ಟೆಂಬರ್ 2, 2026ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಸ್ತುತ ಆರೋಪಿಯು ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿದ್ದು, ಆತನ ವಿರುದ್ಧ ಬಾಡಿ ವಾರಂಟ್ ಜಾರಿಗೊಳಿಸುವಂತೆ ಕೋರಲಾಗಿದೆ.
