ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ; ಮತ್ತೊಂದು ಪ್ರಕರಣ ದಾಖಲು
ಪುತ್ತೂರು: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದು, ಈ ಹಿನ್ನೆಲೆಯಲ್ಲಿ ಮತ್ತೊಂದು ಪ್ರಕರಣವನ್ನು ದಾಖಲಿಸಿದ್ದಾರೆ.
ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ.169/2018ರ ಕಲಂ 323, 504, 506, 406, 424 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿದ್ದ ಕೇರಳ ರಾಜ್ಯದ ಮಲಪ್ಪುರಂ ನಿವಾಸಿ ನಿಖಿಲ್ ಕೆ (36) ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.
ಈತನನ್ನು ಪುತ್ತೂರು ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಜನಾರ್ಧನ ಕೆ.ಎಂ ಹಾಗೂ ಸಿಬ್ಬಂದಿಗಳ ತಂಡವು ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಶಿಲುವೈಪುರದಲ್ಲಿ 21.03.2026ರಂದು ಪತ್ತೆಹಚ್ಚಿ ವಶಕ್ಕೆ ಪಡೆದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.
ಆರೋಪಿತನು ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಪಡೆದ ನಂತರವೂ ವಿಚಾರಣೆಗೆ ಹಾಜರಾಗದೇ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ್ದ ಹಿನ್ನೆಲೆ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ.34/2026ರಡಿ ಕಲಂ 269 ಬಿಎನ್‌ಎಸ್ 2023ರಂತೆ ಮತ್ತೊಂದು ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.













