ನ್ಯಾಷನಲ್ ಹೆರಾಲ್ಡ್ ಕೇಸ್: ಸೋನಿಯಾ, ರಾಹುಲ್ ವಿರುದ್ಧ ದೆಹಲಿ ನ್ಯಾಯಾಲಯ ತೀರ್ಪು ಸ್ವಾಗತಾರ್ಹ -ಮಂಜುನಾಥ ಭಂಡಾರಿ

Spread the love

ನ್ಯಾಷನಲ್ ಹೆರಾಲ್ಡ್ ಕೇಸ್: ಸೋನಿಯಾ, ರಾಹುಲ್ ವಿರುದ್ಧ ದೆಹಲಿ ನ್ಯಾಯಾಲಯ ತೀರ್ಪು ಸ್ವಾಗತಾರ್ಹ -ಮಂಜುನಾಥ ಭಂಡಾರಿ

ಮಂಗಳೂರು: ನ್ಯಾಷನಲ್ ಹೆರಾಲ್ಡ್‌ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ಸಲ್ಲಿಸಿದ್ದ ಚಾರ್ಜ್‌ಶೀಟ್ ಅನ್ನು ಪರಿಗಣಿಸಲು ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯ ನಿರಾಕರಿಸಿರುವುದನ್ನು ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷರಾದ ಮಂಜುನಾಥ ಭಂಡಾರಿ ಅವರು ಸ್ವಾಗತಿಸಿದ್ದಾರೆ. ನ್ಯಾಯಾಲಯದ ತೀರ್ಪು ಸತ್ಯಕ್ಕೆ ಸಂದ ಜಯ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಮೂರ್ತಿ ವಿಶಾಲ್ ಗೋಗಾನೆ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಇಡಿ ಸಲ್ಲಿಸಿರುವ ಆರೋಪಪಟ್ಟಿ ವಿಚಾರಣೆಗೆ ಅರ್ಹವಲ್ಲ ಎಂದು ಅಭಿಪ್ರಾಯಪಟ್ಟಿದೆ. ಇದರಿಂದ ಜನರಿಗೆ ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ನಿಲುವುಗಳ ಮೇಲೆ ವಿಶ್ವಾಸ ಹೆಚ್ಚಿದೆ. ಕಾಂಗ್ರೆಸ್ ಪಕ್ಷ ನ್ಯಾಯಪರ ಹೋರಾಟದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದು ಸದಾ ಸತ್ಯ ಮತ್ತು ನ್ಯಾಯದ ಹಾದಿಯಲ್ಲಿ ಮುನ್ನಡೆಯಲಿದೆ ಎಂದು ಭಂಡಾರಿ ಅವರು ಪ್ರತಿಕ್ರಿಯಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments