ಪಂಜಿಮೊಗರು ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕನ ಬಂಧನ

m
Spread the love

ಪಂಜಿಮೊಗರು ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕನ ಬಂಧನ

ಮಂಗಳೂರು: ಪಂಜಿಮೊಗರು ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕನ್ನು ಕಾವೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.

m

ಬಂಧಿತನನ್ನು ಪಂಜಿಮೊಗರು ಪಡುಕೋಡಿ ನವಿಆಸಿ ಮೊಹಮ್ಮದ್ ಅಶೀರ್ (23) ಎಂದು ಗುರುತಿಸಲಾಗಿದೆ.

ನವೆಂಬರ್ 7ರಂದು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಿಮೊಗರು ಗ್ರಾಮದ ಊರುಂದಾಡಿಯ ರಾಘವೇಂದ್ರ ಮಠದ ಕಡೆಗೆ ಹಾದು ಹೋಗಿರುವ ರಸ್ತೆಯ ಬದಿಯಲ್ಲಿರುವ ಮೈದಾನದಲ್ಲಿ ಪ್ಲಾಸ್ಟಿಕ್ ತೊಟ್ಟೆಯೊಂದರಲ್ಲಿ ಸುಮಾರು 350 ಗ್ರಾಂ ತೂಕದ 6500 ರೂಪಾಯಿ ಮೌಲ್ಯದ ಗಾಂಜಾವನ್ನು ಮತ್ತು 5000 ರೂಪಾಯಿ ಮೌಲ್ಯದ ಮೊಬೈಲ್ ಫೋನನ್ನು ಆರೋಪಿಯಿಂದ ವಶಪಡಿಸಿಕೊಂಡಿದ್ದಾರೆ.

ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love