ಪಂಪ್ವೆಲ್ ಮೇಲ್ಸೇತುವೆಗೆ ವೀರ ಸಾವರ್ಕರ್ ಹೆಸರು- ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಬ್ಯಾನರ್ ಮಾಯ

Spread the love

ಪಂಪ್ವೆಲ್ ಮೇಲ್ಸೇತುವೆಗೆ ವೀರ ಸಾವರ್ಕರ್ ಹೆಸರು- ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಬ್ಯಾನರ್ ಮಾಯ

ಮಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಮೇಲ್ಸೇತುವೆಯೊಂದಕ್ಕೆ ವೀರ ಸಾವರ್ಕರ್ ಹೆಸರಿಡುವ ವಿಚಾರದಲ್ಲಿ ನಡೆಯುತ್ತಿರುವ ಗೊಂದಲಗಳ ನಡುವೆ ಮಂಗಳೂರಿನ ಪಂಪ್ ವೆಲ್ ಮೇಲ್ ಸೇತುವೆಗೆ ಯಾರೋ ವ್ಯಕ್ತಿಗಳು ವೀರ ಸಾವರ್ಕರ್ ಮೇಲ್ಸೇತುವೆ ಎಂದು ನಾಮಕರಣ ಮಾಡಿದ್ದಾರೆ.

ರಾತ್ರೋ ರಾತ್ರಿ ಯಾರೋ ಅಪರಿಚಿತ ವ್ಯಕ್ತಿಗಳು ಪಂಪ್ ವೆಲ್ ಮೇಲ್ಸೆತುವೆಗೆ ವೀರಸಾವರ್ಕರ್ ಮೇಲ್ಸೆತುವೆ ಎಂಬ ಬ್ಯಾನರನ್ನು ಅಂಟಿಸಿದ್ದು ಅದರ ಜೊತೆಗೆ ಹಿಂದೂ ಸಂಘಟನೆಯೊಂದರ ಹೆಸರನ್ನು ಕೂಡ ಬರೆಯಲಾಗಿದೆ.

ಈ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಕೆಲವೇ ಕ್ಷಣಗಳಲ್ಲಿ ಆ ಬ್ಯಾನರ್ ಅಲ್ಲಿಂದ ತೆಗೆಯಲಾಗಿದೆ ಎಂದು ತಿಳಿದು ಬಂದಿದೆ.


Spread the love