Home Mangalorean News Kannada News ಪತ್ರಕರ್ತ ಅರ್ನಬ್ ಗೋಸ್ವಾಮಿ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ದೂರು ದಾಖಲು

ಪತ್ರಕರ್ತ ಅರ್ನಬ್ ಗೋಸ್ವಾಮಿ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ದೂರು ದಾಖಲು

Spread the love

ಪತ್ರಕರ್ತ ಅರ್ನಬ್ ಗೋಸ್ವಾಮಿ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ದೂರು ದಾಖಲು

ಪಾಲ್ಘರ್ ಘಟನೆ ಸಂಬಂಧ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಆರೋಪ ಮಾಡಿದ್ದ ಕಾರಣಕ್ಕಾಗಿ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ದೂರು ದಾಖಲಾಗಿದೆ.

“ತನ್ನ ಟಿವಿ ಕಾರ್ಯಕ್ರಮದಲ್ಲಿ ಸಂಪಾದಕ ಅರ್ನಾಬ್‌ ಗೋಸ್ವಾಮಿ ಅಪರಾಧವನ್ನು ಪ್ರಚೋದಿಸಿದ್ದಾರೆ ಮತ್ತು ಕೋಮು ಸೌಹಾರ್ದತೆಯನ್ನು ಭಂಗಗೊಳಿಸಲು ಪ್ರಯತ್ನಿಸಿದ್ದಾರೆ. ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಸಂಬಂಧ ಭಾರತೀಯ ದಂಡ ಸಂಹಿತೆಯ ವಿವಿಧ ವಿಭಾಗಗಳ ಅಡಿಯಲ್ಲಿಅರ್ನಾಬ್ ವಿರುದ್ದ ಪ್ರಕರಣ ದಾಖಲಿಸುವಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಆಗ್ರಹಿಸಿದ್ದಾರೆ

  • ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಕಿಶನ್ ಹೆಗ್ಡೆ, ಯತೀಶ್ ಕರ್ಕೇರಾ ಉಪಸ್ಥಿತರಿದ್ದರು

Spread the love

Exit mobile version