ಪತ್ರಿಕೋದ್ಯಮದಲ್ಲಿ ಛಾಯಾಗ್ರಹಣದ ಪಾತ್ರ ಪ್ರಮುಖ’  – ಶ್ರೀನಿವಾಸ ಪೆಜತ್ತಾಯ

Spread the love

ಪತ್ರಿಕೋದ್ಯಮದಲ್ಲಿ ಛಾಯಾಗ್ರಹಣದ ಪಾತ್ರ ಪ್ರಮುಖ’  – ಶ್ರೀನಿವಾಸ ಪೆಜತ್ತಾಯ

ಮಂಗಳೂರು: ಪತ್ರಿಕೋದ್ಯಮದಲ್ಲಿ ಛಾಯಾಗ್ರಹಣವೂ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತದೆ, ಛಾಯಾಚಿತ್ರವೊಂದಕ್ಕೆ ಅಗಾಧ ವಿಚಾರಗಳನ್ನು ಸರಳವಾಗಿ ಮತ್ತು ಕ್ರಿಯಾತ್ಮಕವಾಗಿ ತಿಳಿಸಬಲ್ಲ ಸಾಮಥ್ರ್ಯವಿದೆ ಎಂದು ಮೂಡಬಿದಿರೆ ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಶ್ರೀನಿವಾಸ ಪೆಜತ್ತಾಯ ಹೇಳಿದರು.

ಮಂಗಳೂರಿನ ಡಾ.ಪಿ.ದಯಾನಂದ ಪೈ-ಪಿ.ಸತೀಶ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ನಡೆದ ‘ಪತ್ರಿಕೋದ್ಯಮ ಮತ್ತು ಛಾಯಾಗ್ರಹಣ’ ವಿಶೇಷ ತರಬೇತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಅವರು ಮಾತನಾಡಿದರು. ನುಡಿಚಿತ್ರ, ವರದಿ, ಲೇಖನ ಮುಂತಾದವುಗಳಿಗೆ ಸೂಕ್ತ ಛಾಯಾಚಿತ್ರ ಅತ್ಯಗತ್ಯ. ಆದ್ದರಿಂದ ಛಾಯಾಗ್ರಹಣವೂ ಪತ್ರಿಕೋದ್ಯಮದ ಅವಿಭಾಜ್ಯ ಅಂಗ ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಂಶುಪಾಲ ಪೆÇ್ರ. ರಾಜಶೇಖರ ಹೆಬ್ಬಾರ್.ಸಿ ಮಾತನಾಡಿ, ವಿದ್ಯಾರ್ಥಿಗಳು ಛಾಯಾಗ್ರಹಣದ ಕಲೆಯನ್ನು ಮೈಗೂಡಿಸಿಕೊಳ್ಳಬೇಕು ಪರಿಸರದ ಸಮಾಜದ ಆಗುಹೋಗುಗಳನ್ನು ಬಿಂಬಿಸುವಲ್ಲಿ ಛಾಯಾಗ್ರಹಣ ಮಹತ್ತರ ಪಾತ್ರವನ್ನು ನಿರ್ವಹಿಸುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಎಂ.ಸಿ.ಜೆ ವಿಭಾಗದ ಸಹಾಯಕ ಪ್ರಾಧ್ಯಾಪಕ ಚೈತನ್ಯ ಕೆ ಎಂ, ಮಂಗಳೂರಿನ ಡಾ.ಪಿ ದಯಾನಂದ ಪೈ- ಪಿ ಸತೀಶ ಪೈ ಸ.ಪ್ರ.ದ. ಕಾಲೇಜಿನ ಮುಖ್ಯ ಶೈಕ್ಷಣಿಕ ಸಲಹೆಗಾರ ಡಾ.ಶಿವರಾಮ ಪಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಜಯಕರ ಭಂಡಾರಿ, ಪತ್ರಿಕೋದ್ಯಮ ವಿಭಾಗ ಸಂಚಾಲಕ ಡಾ.ಜಯಶ್ರೀ ಬಿ, ಪತ್ರಿಕೋದ್ಯಮ ಉಪನ್ಯಾಸಕ ಅಭಿμÉೀಕ್, ಚೇತನ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥ ಪೆÇ್ರ. ಶೇಷಪ್ಪ ಸಂಪನ್ಮೂಲ ವ್ಯಕ್ತಿಗಳನ್ನು ಗೌರವಿಸಿದರು. ಪತ್ರಿಕೋದ್ಯಮ ವಿಭಾಗ ಸಂಚಾಲಕಿ ಡಾ. ಜಯಶ್ರೀ ಬಿ ಸ್ವಾಗತಿಸಿ, ಪ್ರಥಮ ಪತ್ರಿಕೋದ್ಯಮ ವಿದ್ಯಾರ್ಥಿನಿ ಸುಜಾತ ವಂದಿಸಿದರು. ದ್ವಿತೀಯ ಪತ್ರಿಕೋದ್ಯಮ ವಿದ್ಯಾರ್ಥಿನಿ ತೇಜಸ್ವಿನಿ.ಕೆ ಕಾರ್ಯಕ್ರಮ ನಿರೂಪಿಸಿದರು.


Spread the love