ಪರಿಶಿಷ್ಟರ ಅಭಿವೃದ್ಧಿಗೆ ಸರಕಾರದಿಂದ ಹಲವು ಕಾರ್ಯಕ್ರಮ : ಕೆ.ಎಚ್ ಮುನಿಯಪ್ಪ

Spread the love

ಪರಿಶಿಷ್ಟರ ಅಭಿವೃದ್ಧಿಗೆ ಸರಕಾರದಿಂದ ಹಲವು ಕಾರ್ಯಕ್ರಮ : ಕೆ.ಎಚ್ ಮುನಿಯಪ್ಪ

ಮಂಗಳೂರು: ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಸೇರಿದಂತೆ ಎಲ್ಲಾ ವರ್ಗದ ಬಡ ಜನರಿಗೆ ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶನ ಹಂಚಿಕೆ ಮಾಡಲು ಸರಕಾರ ಚಿಂತಿಸಿದೆ ಎಂದು ಸಮಾಜ ಕಲ್ಯಾಣ ಸಚಿವರಾದ ಕೆ.ಎಚ್ ಮುನಿಯಪ್ಪ ಅವರು ತಿಳಿಸಿದ್ದಾರೆ.

ನಗರದ ಖಾಸಗಿ ಹೋಟೆಲ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಸೇರಿದಂತೆ ಎಲ್ಲಾ ಬಡಜನರಿಗೆ ಮೂಲ ಸೌಕರ್ಯ ಒದಗಿಸಲು ಸರಕಾರ ಉದ್ದೇಶಿಸಿದೆ ಎಂದು ಸಚಿವರು ಹೇಳಿದರು.

ಭೂ ಒಡೆತನ ಯೋಜನೆಯಲ್ಲಿ ಭೂಮಿ ಇಲ್ಲದ ಪರಿಶಿಷ್ಟರಿಗೆ ಭೂಮಿ ಒದಗಿಸಲು ಮುಂದಾಗಲಾಗಿದೆ. ಹಾಗೆಯೇ ನಿರಾಶ್ರಿತರಿಗೆ ಕನಿಷ್ಠ ಮೂಲ ಸೌಲಭ್ಯ ಒದಗಿಸಲು ಸರಕಾರ ಅಗತ್ಯ ಕ್ರಮ ಕೈಗೊಂಡಿದೆ ಸಚಿವರಾದ ಕೆ.ಎಚ್ ಮುನಿಯಪ್ಪ ಅವರು ಹೇಳಿದರು.

ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯ ಬೇಡಿಕೆಗೆ ತಕ್ಕಂತೆ ಆರಂಭಿಸಲಾಗುವುದು. ಹಾಗೆಯೇ ವಸತಿ ಶಾಲೆಗಳಿಗೆ ಇನ್ನೂ ಹೆಚ್ಚಿನ ಬೇಡಿಕೆ ಇದ್ದು, ಇವುಗಳನ್ನು ಕೂಡ ಆರಂಭಿಸಲಾಗುವುದು ಎಂದು ಸಚಿವರು ತಿಳಿಸಿದರು.

ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಉಪಯೋಜನೆ ಕಾರ್ಯಕ್ರಮಗಳನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು ವಿವಿಧ ಇಲಾಖೆಯ ಶೇಕಡಾ 24 ರಷ್ಟು ಅನುದಾನ ಪರಿಶಿಷ್ಟರಿಗೆ ತಲುಪುತ್ತಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ರಾಜ್ಯಾದ್ಯಂತ ಸಮುದಾಯ ಭವನ ನಿರ್ಮಾಣಕ್ಕೆ ಬೇಡಿಕೆ ಇದ್ದು, ಜಿಲ್ಲಾ ಮಟ್ಟದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ 4 ಕೋಟಿ ರೂ., ತಾಲೂಕು ಮಟ್ಟದಲ್ಲಿ 2 ಕೋಟಿ ರೂ, ಹೋಬಳಿ ಮಟ್ಟದಲ್ಲಿ 85 ಲಕ್ಷ, ಪಂಚಾಯತ್ ಮಟ್ಟದಲ್ಲಿ 20 ಲಕ್ಷ ಅನುದಾನ ಬರಿಸಲಾಗುತ್ತಿದ್ದು, ಗ್ರಂಥಾಲಯ ಒಳಗೊಂಡಂತೆ ವಿವಿಧ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದರು.

ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿದ್ಯಾರ್ಥಿನಿಲಯಗಳು, ವಸತಿ ಶಾಲೆಗಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ. ಆ ನಿಟ್ಟಿನಲ್ಲಿ ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿಗಳು ಶೇ.90 ಕ್ಕಿಂತ ಹೆಚ್ಚಿನ ಅಂಕ ಪಡೆದು ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ ಎಂದು ಸಚಿವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಆಯುಕ್ತರಾದ ರಾಕೇಶ್ ಕುಮಾರ್ ಇತರರು ಇದ್ದರು.


Spread the love
Subscribe
Notify of

0 Comments