ಪರಿಷತ್ ಚುನಾವಣೆಗೆ ಕಾಂಗ್ರೇಸ್ ಅಭ್ಯರ್ಥಿಗಳಾಗಿ ಹರಿಪ್ರಸಾದ್, ನಜೀರ್ ಅಹ್ಮದ್ ನಾಮಪತ್ರ ಸಲ್ಲಿಕೆ

Spread the love

ಪರಿಷತ್ ಚುನಾವಣೆಗೆ ಕಾಂಗ್ರೇಸ್ ಅಭ್ಯರ್ಥಿಗಳಾಗಿ ಹರಿಪ್ರಸಾದ್, ನಜೀರ್ ಅಹ್ಮದ್ ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಗಳಾಗಿ ಬಿ.ಕೆ.ಹರಿಪ್ರಸಾದ್ ಮತ್ತು ನಜೀರ್ ಅಹ್ಮದ್ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಮಾಜಿ ಸಚಿವರಾದ ರಾಮಲಿಂಗಾ ರೆಡ್ಡಿ, ಯು.ಟಿ ಖಾದರ್ ಹಾಗೂ ದಿನೇಶ್ ಗುಂಡುರಾವ್, ಶಾಸಕರಾದ ಹ್ಯಾರಿಸ್ ಅವರು ಉಪಸ್ಥಿತರಿದ್ದರು.

ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಇಬ್ಬರು ಅಭ್ಯರ್ಥಿಗಳನ್ನಾಗಿ ಹೈಕಮಾಂಡ್ ಬಿಕೆ ಹರಿಪ್ರಸಾದ್ ಮತ್ತು ನಾಸೀರ್ ಅಹಮ್ಮದ್ ಅವರಿಗೆ ಟಿಕೇಟ್ ಘೋಷಣೆ ಮಾಡಿತ್ತು.

ವಿಧಾನಪರಿಷತ್ ಚುನಾವಣೆಗೆ ಕಾಂಗ್ರೇಸ್ ಪಕ್ಷದ ಎರಡನೇ ಅಭ್ಯರ್ಥಿಯಾಗಿ ನಜೀರ್ ಅಹ್ಮದ್ ಅವರು ಇಂದು ನಾಮಪತ್ರ ಸಲ್ಲಿಸಿದರು.


Spread the love