ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ

Spread the love

ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ

ಮ0ಗಳೂರು: ಜುಲೈ 24 ರಂದು ಉಪ್ಪಿನಂಗಡಿ ಗೃಹರಕ್ಷಕದಳ ಘಟಕದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ಉಪ್ಪಿನಂಗಡಿಯ ಸರಕಾರಿ ಶಾಲೆಯ ಆವರಣದಲ್ಲಿ ನಡೆಯಿತು.
ಸರಕಾರಿ ಶಾಲೆಯ ಸಮಾಜಶಾಸ್ತ್ರ ಪ್ರಾದ್ಯಪಕರಾದ ಸುರೇಶ್ ಅವರು ಮುಖ್ಯ ಅತಿಥಿಯಾಗಿ ಮಾತನಾಡುತ್ತಾ ಆಧುನೀಕರಣ ಮತ್ತು ಕೈಗಾರೀಕರಣ ಎಂದು ನಾವೆಲ್ಲಾ ಕಾಡು ಕಡಿದು ಕಾಂಕ್ರೀಟೀಕರಣಗೊಳಿಸುವುದರಿಂದ ಬದುಕಲು ಮತ್ತು ಉಸಿರಾಡಲು ಕಷ್ಟವಾಗುವ ಪರಿಸ್ಥಿತಿ ನಿರ್ಮಿಸಿಕೊಂಡಿರುವುದು ವಿಷಾಧನೀಯ ಎಂದು ಎಚ್ಚರಿಕೆ ನೀಡಿದರು. ಪ್ರತಿಯೊಬ್ಬರೂ ತನ್ನ ಸಾಮಾಜಿಕ ಹೊಣೆಗಾರಿಕೆ ಅರಿತು ಗಿಡಮರ ನೆಟ್ಟು ಬೆಳೆಸಿದಲ್ಲಿ ಸುಂದರ ಸದೃಡ ಸಮಾಜ ನಿರ್ಮಾಣವಾಗಬಹುದು ಎಂದು ಹೇಳಿದರು.

home gd 2

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ. ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲಿ ಮೋಹನ್ ಚೂಂತಾರು ವಹಿಸಿದ್ದರು. ಉಪಸಮಾದೇಷ್ಟ ರಮೇಶ್ ಹಾಗೂ ಉಪ್ಪಿನಂಗಡಿ ಘಟಕಾಧಿಕಾರಿ ರಾಮಣ್ಣ ಆಚಾರ್ ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸುಮಾರು 40 ಕ್ಕೂ ಹೆಚ್ಚು ಗೃಹರಕ್ಷಕ ಮತ್ತು ಗೃಹರಕ್ಷಕಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಎಂದು ಪ್ರಕಟಣೆ ತಿಳಿಸಿದೆ.


Spread the love