ಪರ್ಯಾಯ ಮಹೋತ್ಸವಕ್ಕೆ ರೂ. 50 ಕೋಟಿ ವಿಶೇಷ ಅನುದಾನವನ್ನು ಮಂಜೂರು ಮಾಡುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಮನವಿ

Spread the love

ಪರ್ಯಾಯ ಮಹೋತ್ಸವಕ್ಕೆ ರೂ. 50 ಕೋಟಿ ವಿಶೇಷ ಅನುದಾನವನ್ನು ಮಂಜೂರು ಮಾಡುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಮನವಿ

ಉಡುಪಿ: ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ಉಡುಪಿ ನಗರದ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ರೂ. 50 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.

ಪ್ರತಿ ಎರಡು ವರ್ಷಗಳಿಗೊಮ್ಮೆ ನಡೆಯುವ ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವ ನಾಡಹಬ್ಬ ಮಾದರಿಯಲ್ಲಿ ಅತ್ಯಂತ ವೈಭವಪೂರ್ಣವಾಗಿ ನಡೆಯುತ್ತಿದ್ದು ದೇಶ ವಿದೇಶದ ಲಕ್ಷಾಂತರ ಭಕ್ತರು ಉಡುಪಿಗೆ ಭೇಟಿ ನೀಡುತ್ತಾರೆ.

2026ನೇ ಇಸವಿಯ ಜನವರಿಯ ದಿನಾಂಕ 17 ಮತ್ತು 18 ರಂದು ಶ್ರೀ ಶೀರೂರು ವಾಮನ ತೀರ್ಥ ಸಂಸ್ಥಾನದ ಮಠಾಧೀಶರಾದ ಪರಮ ಪೂಜ್ಯ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಪರ್ಯಾಯ ಪೀಠಾರೋಹಣಗೈಯ್ಯಲಿದ್ದಾರೆ.

ಉಡುಪಿ ಜಿಲ್ಲೆಗೆ ಪ್ರವಾಸಿಗರನ್ನು ಆಕರ್ಷಿಸುವ ಟೆಂಪಲ್ ಟೂರಿಸಂ ಭಾಗವಾಗಿರುವ ಪರ್ಯಾಯ ಮಹೋತ್ಸವವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ರಸ್ತೆಗಳ ದುರಸ್ತಿ, ಮರು ಡಾಮರೀಕರಣ ಹಾಗೂ ಸ್ವಚ್ಛತೆಗಾಗಿ ಸೂಕ್ತ ಅನುದಾನದ ಅಗತ್ಯವಿರುತ್ತದೆ.

ನೈರ್ಮಲ್ಯ, ದೀಪಾಲಂಕಾರ, ಮೂಲ ಸೌಕರ್ಯ ಅಗತ್ಯ ಕಾಮಗಾರಿಗಳಿಗೆ ರೂ. 50 ಕೋಟಿ ವಿಶೇಷ ಅನುದಾನವನ್ನು ಶ್ರೀ ಕೃಷ್ಣನ ಪರ್ಯಾಯ ಮಹೋತ್ಸವಕ್ಕಾಗಿ ಮಂಜೂರು ಮಾಡುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments